News Kannada
Thursday, December 01 2022

ಮೈಸೂರು

ಮೈಸೂರು: ದಸರಾ ಉತ್ಸವಕ್ಕೆ ರಾಜಮಾತೆಗೆ ಆಹ್ವಾನ

Mysuru: Rajmata invited for Dasara festivities
Photo Credit : By Author

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಉತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರನ್ನು ಮೈಸೂರು ಅರಮನೆಯ ಖಾಸಗಿ ನಿವಾಸದಲ್ಲಿ ಸಾಂಪ್ರದಾಯಿಕವಾಗಿ ಫಲಪುಷ್ಪ ತಾಂಬೂಲ ನೀಡಿ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ದಸರಾ ಉತ್ಸವಕ್ಕೆ ಆಹ್ವಾನಿಸಿದರು.

ಈ ವೇಳೆ ಮಾತನಾಡಿದ ಸಚಿವರು, ದಸರಾ ಉತ್ಸವಕ್ಕೆ ವ್ಯವಸ್ಥಿತವಾಗಿ ಸಿದ್ಧತೆಗಳು ನಡೆಯುತ್ತಿದೆ. ದಸರಾ ಉತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರನ್ನು ಆಹ್ವಾನಿಸಲಾಯಿತು. ದಸರಾಗೆ ಸಂಪೂರ್ಣ ಸಹಕಾರ ನೀಡುವುದಾಗಿ ಅವರು ಹೇಳಿದರು. ಯುವ ದಸರಾಗೆ ನಟ ಕಿಚ್ಚ ಸುದೀಪ್ ಅವರು ಆಗಮಿಸುತ್ತಿಲ್ಲ. ಅನಿವಾರ್ಯ ಕಾರಣಗಳಿಂದ ಫಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಪರ್ಯಾಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ದಸರಾ ಕಾರ್ಯಕ್ರಮಗಳಲ್ಲಿ ಶಾಸಕ ರಾಮದಾಸ್ ಅವರು ಪಾಲ್ಗೊಳ್ಳುತ್ತಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ರಾಮದಾಸ್ ಅವರು ಮೋದಿ ಯುಗ ಉತ್ಸವ ಮಾಡುತ್ತಿದ್ದಾರೆ. ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ಹೇಳಿದರು.

ದಸರಾ ಸಂಬಂಧ ಪ್ರಚಾರದ ಕೊರತೆ ಆಗಿಲ್ಲ. ಏನಾದರೂ ಸಮಸ್ಯೆ ಇದ್ದರೆ ಪರಿಹರಿಸಲಾಗುವುದು ಪ್ರಚಾರ ಸಮಿತಿ ರಚನೆ ಮಾಡಿದ್ದು ಎಲ್ಲಾ ರೀತಿಯಲ್ಲಿ ಕೆಲಸ ಮಾಡಲಾಗುತ್ತಿದೆ. ಸೋಮವಾರ ರಾಷ್ಟ್ರಪತಿಗಳು ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ ಮಾಡಲಿದ್ದಾರೆ. ವೇದಿಕೆಯಲ್ಲಿ 13 ಆಸನಗಳಿರಲಿವೆ. ರಾಷ್ಟ್ರಪತಿಗಳು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಆರು ಕೇಂದ್ರ ಸಚಿವರು, ನಾಲ್ವರು ರಾಜ್ಯ ಸಚಿವರು ವೇದಿಕೆಯಲ್ಲಿ ಇರಲಿದ್ದಾರೆ ಎಂದು ಹೇಳಿದರು.

ಸಂಸದ ಪ್ರತಾಪ್ ಸಿಂಹ, ವಿಧಾನಪರಿಷತ್ ಸದಸ್ಯ ಮಂಜೇಗೌಡ, ಮೇಯರ್ ಶಿವಕುಮಾರ್, ಉಪಮೇಯರ್ ಜಿ.ರೂಪಾ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಪ್ರಮೋದಾದೇವಿ ಒಡೆಯರ್ ಅವರಿಗೆ ಸನ್ಮಾನ ಮಾಡಿ, ಸರ್ಕಾರದಿಂದ ಪ್ರತಿವರ್ಷ ನೀಡಲಾಗುವ ಗೌರವಧನ ನೀಡಲಾಯಿತು.

See also  ನಿವೃತ್ತ ಎಸಿಪಿಗೆ ಕೊಲೆ ಬೆದರಿಕೆ ; ಕ್ರಮ ಕೈಗೊಳ್ಳದ ಪೋಲೀಸ್‌ ?
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು