News Kannada
Monday, December 05 2022

ಮೈಸೂರು

ಮೈಸೂರು: ಮಕ್ಕಳ ಬುದ್ಧಿಶಕ್ತಿ ವೃದ್ಧಿಗೆ ಮೊಬೈಲ್‌ನಿಂದ ದೂರವಿಡಿ

Photo Credit : By Author

ಮೈಸೂರು: ಮಕ್ಕಳ ಬುದ್ಧಿಶಕ್ತಿ ವೃದ್ಧಿಯಾಗಿ ಅವರು ಸಮಾಜ ಮುಖಿಯಾಗಿ ಬೆಳೆಯಬೇಕಾದರೆ ಅವರನ್ನು ಮೊಬೈಲ್ ಬಳಕೆಯಿಂದ ದೂರವಿಡಿ ಎಂದು ನಿಮಾನ್ಸ್‌ನ ನಿವೃತ್ತ ಪ್ರಾಧ್ಯಾಪಕ ಹಾಗೂ ಬೆಂಗಳೂರಿನ ಹಿರಿಯ ಮನೋವೈದ್ಯ ಡಾ.ಸಿ.ಆರ್.ಚಂದ್ರಶೇಖರ್ ಸಲಹೆ ನೀಡಿದರು.

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಹೆಬ್ಬಾಳ್‌ನಲ್ಲಿರುವ ದಿ ರಿವೈವ್ ಆಸ್ಪತ್ರೆಯಲ್ಲಿ ಆತ್ಮಹತ್ಯೆ ತಡೆ ಎಂಬ ಉಚಿತ ಸಹಾಯವಾಣಿ ಹಾಗೂ ಒಂದು ತಿಂಗಳ ಉಚಿತ ಮಾನಸಿಕ ಆರೋಗ್ಯ ತಪಾಸಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಮಕ್ಕಳಿಗೆ ಪೋಷಕರೆ ಮೊಬೈಲ್ ಬಳಕೆಯ ಅಭ್ಯಾಸ ಮಾಡಿಸುತ್ತಿದ್ದಾರೆ. ಪುಟ್ಟ ಮಕ್ಕಳಿಗೆ ಊಟ ಮಾಡಿಸುವುದರಿಂದ ಯಾವುದೇ ಕೆಲಸಕ್ಕೂ ಮೊಬೈಲ್ ಆಸೆ ತೋರಿಸುತ್ತಾರೆ. ಹೀಗೆ ಸ್ಕ್ರೀನ್ ಟೈಂ ಹೆಚ್ಚಾಗುತ್ತಿದ್ದಂತೆ ಮಕ್ಕಳ ಕಣ್ಣು ಹಾಗೂ ಬುದ್ಧಿಶಕ್ತಿಯ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ. ಈ ಬಗ್ಗೆ ಪೋಷಕರು ಎಚ್ಚರಿಕೆ ವಹಿಸಬೇಕೆಂದು ಸಲಹೆ ನೀಡಿದರು.

ಕೋವಿಡ್‌ನಂತರ ಎರಡು ವರ್ಷ ಕಲಿಕೆಯಿಂದ ಹಿಂದುಳಿದ ಹಾಗೂ ಶಾಲಾ ವಾತಾವರಣದಿಂದ ದೂರ ಉಳಿದ 6ನೇ ತರಗತಿ ಒಳಗಿನ ಮಕ್ಕಳಿಗೆ ಮತ್ತೆ ಶಾಲಾ ವಾತಾವರಣಕ್ಕೆ ಒಗ್ಗಿಸುವುದು ಕಷ್ಟಕರವಾಗುತ್ತಿದೆ. ಇದು ಮಕ್ಕಳು, ಪೋಷಕರು, ಶಿಕ್ಷಕರಿಗೆ ಬಹುದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಇದನ್ನು ಜಾಣ್ಮೆಯಿಂದ ಬಗೆಹರಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಆಸ್ಪತ್ರೆಯ ಕಾರ್ಯಕಾರಿ ಸಮಿತಿ ನಿರ್ದೇಶಕ ಹಾಗೂ ಮನೋವೈದ್ಯ ಡಾ.ಕೆ.ಆರ್.ಕೃಷ್ಣ ಮಾತನಾಡಿ, ಮಕ್ಕಳು ಹೆಚ್ಚಾಗಿ ಮೊಬೈಲ್ ಬಳಕೆ ಮಾಡುವುದರಿಂದ ಅವರ ಸ್ಮರಣ ಶಕ್ತಿ ಕಡಿಮೆಯಾಗುತ್ತದೆ. ಮೊಬೈಲ್ ದೊರೆಯದಿದ್ದರೆ ಚಡಪಡಿಕೆ, ಸಿಡುಕು ಸೇರಿದಂತೆ ಇನ್ನಿತರ ನಡವಳಿಕೆ ದೋಷಗಳು ಕಂಡುಬರುತ್ತವೆ. ಹೀಗಾಗಿ ಪೋಷಕರು ಮಕ್ಕಳಿಗೆ ಮೊಬೈಲ್ ನೀಡುವುದನ್ನು ತಪ್ಪಿಸಬೇಕೆಂದು ಮನವಿ ಮಾಡಿದರು.

ಕಾರ್ಯಕಾರಿ ಸಮಿತಿ ನಿರ್ದೇಶಕ ಪವನ್ ನಾಗ್ ಮಾತನಾಡಿ, ಮಾನಸಿಕ, ದೈಹಿಕ, ಆದ್ಯಾತ್ಮಿಕ, ಸಾಮಾಜಿಕವಾಗಿ ಆರೋಗ್ಯಕರ ನಡವಳಿಕೆ ಹೊಂದಿದ್ದರೆ ಅಂತಹವರಲ್ಲಿ ಪರಿಪೂರ್ಣ ವ್ಯಕ್ತಿತ್ವವಿರುತ್ತದೆ. ಇವುಗಳಲ್ಲಿ ಯಾವುದೇ ಕೊರತೆಯಾದರೂ ಉತ್ತಮ ಜೀವನ ನಡೆಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಈ ನಾಲ್ಕು ಅಂಶಗಳ ಸಮರ್ಪಕ ನಿರ್ವಹಣೆ ಮಾಡುವಂತೆ ಸಲಹೆ ನೀಡಿದರು. ಇದಕ್ಕೂ ಮುನ್ನ ಮನೋವೈದ್ಯ ಡಾ.ಸಿ.ಆರ್.ಚಂದ್ರಶೇಖರ್ ಅವರ 15ಸ್ಕಿಲ್ ಫಾರ್ ಚಿಲ್ಡ್ರನ್ ಪುಸ್ತಕ ಬಿಡುಗಡೆಗೊಳಿಸಲಾಯಿತು.

See also  ಶಾಲೆಯಲ್ಲೇ ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ, ಮುಖ್ಯ ಶಿಕ್ಷಕನ ವಿರುದ್ಧ ಪ್ರಕರಣ ದಾಖಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು