ಮೈಸೂರು: ಬಸ್ ನಿಲ್ದಾಣದ ಮೇಲಿದ್ದ ಎರಡು ಗುಂಬಜ್ ಗಳನ್ನು ತೆರವುಗೊಳಿಸಿದ ಬೆನ್ನಲೇ, ಮಾತಿನಂತೆ ನಡೆದುಕೊಂಡಿದ್ದೇನೆ ಎಂದು ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.
ಮಧ್ಯದಲ್ಲೊಂದು ದೊಡ್ಡ ಗುಂಬಜ್, ಅಕ್ಕಪಕ್ಕ ಎರಡು ಚಿಕ್ಕ ಗುಂಬಜ್ ಇದ್ದರೆ ಅದು ಮಸೀದಿನೇ, ಅದನ್ನು ತೆರವು ಮಾಡಿಸುತ್ತೇನೆ ಎಂದಿದ್ದೆ ಮತ್ತು ಅದರಂತೆ ನಡೆದುಕೊಂಡಿದ್ದೇನೆ. ಕಾಲಾವಕಾಶ ಕೇಳಿ ಮಾತಿನಂತೆ ನಡೆದುಕೊಂಡ ಜಿಲ್ಲಾಧಿಕಾರಿಗಳಿಗೆ ಹಾಗೂ ವಾಸ್ತವ ಅರಿತು ಜನಾಭಿಪ್ರಾಯಕ್ಕೆ ತಲೆಬಾಗಿದ ಶಾಸಕ ರಾಮದಾಸ್ ಜಿ ಅವರಿಗೂ ಧನ್ಯವಾದ ಎಂದು ತಿಳಿಸಿದ್ದಾರೆ.
ಸಂಸದ ಪ್ರತಾಪ್ ಸಿಂಹ ಅವರು ಗುಂಬಜ್ ಗಳಂತೆ ಕಾಣುತ್ತಿದೆ ಎಂದು ಆರೋಪಿಸಿ ಎಲ್ಲಾ ಗುಂಬಜ್ ಗಳನ್ನು ನೆಲಸಮಗೊಳಿಸುವ ಎಚ್ಚರಿಕೆ ನೀಡಿದ್ದರು. ಮೈಸೂರು ಅರಮನೆ ಮಾದರಿಯನ್ನು ಉಲ್ಲೇಖಿಸಿ ಬಸ್ ನಿಲ್ದಾಣದಲ್ಲಿ ಈ ಗುಂಬಜ್ ಗಳನ್ನು ವಿನ್ಯಾಸಗೊಳಿಸಿದ ಎಸ್.ಎ.ರಾಮದಾಸ್ ಅವರನ್ನು ಸಂಸದ ಪ್ರತಾಪ್ ಸಿಂಹ ಟೀಕಿಸಿಸಿದ್ದು, ಈ ವಿವಾದವು ಬಿಜೆಪಿಗೆ ಮುಜುಗರವನ್ನುಂಟು ಮಾಡಿತು.