News Kannada
Thursday, February 02 2023

ಮೈಸೂರು

ಮೈಸೂರು: ಡಿ.8 ರಿಂದ ‘ಬಹುರೂಪಿ’ ರಾಷ್ಟ್ರೀಯ ರಂಗೋತ್ಸವ

Mysuru: 'Bahuroopi' National Theatre Festival to be held from Dec.8
Photo Credit : By Author

ಮೈಸೂರು: ರಂಗಾಯಣ ಮೈಸೂರು ಹಾಗೂ ಜಿಲ್ಲಾಡಳಿತದ ಸಹಯೋಗದೊಂದಿಗೆ ರಾಷ್ಟ್ರಮಟ್ಟದಲ್ಲಿ ನಡೆಯುವ ಜೈಪುರಿ ಸಾಹಿತ್ಯ ಉತ್ಸವದಂತೆ 22 ನೇ ಬಹುರೂಪಿ ರಾಷ್ಟ್ರೀಯ ರಂಗೋತ್ಸವ ಡಿ.8ರಿಂದ 15ರವರೆಗೆ ನಡೆಯಲಿದೆ.

ರಂಗೋತ್ಸವವು 8 ದಿನಗಳ ಕಾಲ ನಡೆಯಲಿದ್ದು, ರಂಗಾಯಣದ 05 ಪ್ರಮುಖ ಸ್ಥಳಗಳಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಲಿವೆ, ಬೆಳಿಗ್ಗೆ ಹತ್ತರಿಂದ ರಾತ್ರಿ ಹತ್ತರವರಗೆ ಕಾರ್ಯಕ್ರಮಗಳು ನಡೆಯಲಿದ್ದು ಒಟ್ಟು 21 ನಾಟಕಗಳು ಪ್ರದರ್ಶನಗೊಳ್ಳಲಿವೆ.

ಭಾರತೀಯತೆ ಎಂಬುದು ಈ ಬಾರಿಯ ವಿಷಯವಾಗಿದ್ದು, ಭಾರತೀಯತೆ ಎಂಬ ವಿಷಯದಲ್ಲಿ ವಿಚಾರ ಸಂಕಿರಣ ಕೂಡ ನಡೆಯಲಿದೆ. ಇದರೊಂದಿಗೆ ವಸ್ತು ಪ್ರದರ್ಶನ, ಜಾನಪದ ಕಾರ್ಯಕ್ರಮ ನಡೆಯಲಿವೆ. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಆಗಮಿಸುತಿದ್ದು ಕಲಾಮಂದಿರದ ಆಜುಬಾಜು ಟ್ರಾಫಿಕ್ ಸಮಸ್ಯೆಯಾಗದಂತೆ ಸಾರಿಗೆ ಇಲಾಖೆಯವರು ನೋಡಿಕೊಳ್ಳುವಂತೆ ಹಾಗೂ ನಗರ ಪಾಲಿಕೆಯವರು ರಂಗಾಯಣದ ಆವರಣದ ಸ್ವಚ್ಚತೆ ನೋಡಿಕೊಳ್ಳಲು ಹೊರರಾಜ್ಯಗಳಿಂದ ಆಗಮಿಸುವ ಕಲಾವಿದರುಗಳ ಆರ್‌ಟಿಪಿಸಿಆರ್ ಪರೀಕ್ಷೆಗಳನ್ನು ಆರೋಗ್ಯ ಇಲಾಖೆಯವರು ನೋಡಿಕೊಳ್ಳಲು ಸೂಚಿಸಲಾಗಿದೆ.

See also  ಮಂಡ್ಯ: ಪ್ರವಾಸಿಗರ ಕಣ್ಮನ ತಣಿಸುತ್ತಿದೆ ಹೇಮಗಿರಿಯ ಚೆಲುವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು