News Kannada
Sunday, September 24 2023
ಮೈಸೂರು

ಮೈಸೂರು: ಜನವರಿಯಲ್ಲಿ ಪೆರಿಫೆರಲ್ ರಸ್ತೆಗೆ ಟೆಂಡರ್ ಕರೆಯಲಾಗುತ್ತದೆ- ಪ್ರತಾಪ್ ಸಿಂಹ

Mysore/Mysuru: Tenders will be called for peripheral road in January- Pratap Simha
Photo Credit : By Author

ಮೈಸೂರು: ನಗರದ ಪೆರಿಫೆರಲ್ ವರ್ತುಲ ರಸ್ತೆ ನಿರ್ಮಾಣಕ್ಕೆ ಅಗತ್ಯವಾದ ಡಿಪಿಆರ್ ಸಿದ್ಧಪಡಿಸಲಾಗುತ್ತಿದ್ದು, ಮುಂದಿನ 2023ರ ಜನವರಿ ಮೊದಲ ವಾರದಲ್ಲಿ ಟೆಂಡರ್ ಕರೆಯಲಾಗುವುದಾಗಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಶನಿವಾರ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಫೆರಿಫೆರಲ್ ವರ್ತುಲ ರಸ್ತೆ ನಿರ್ಮಿಸುವ ಬಗ್ಗೆ ಹಿಂದಿನಿಂದಲೂ ಪ್ರಸ್ತಾಪಗಳಾಗಿವೆ, ಚರ್ಚೆಯೂ ಆಗಿದೆ. ಆದರೆ, ಯಾವುದೇ ಸ್ಪಷ್ಟ ನಿರ್ಧಾರ ಆಗಿರಲಿಲ್ಲ. ನಾವು 6 ತಿಂಗಳಿಂದೀಚೆಗೆ ಇದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಜೂನ್ 5ರಂದು ಇಲ್ಲಿಗೆ ಬಂದಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಮುಡಾದ ಆಗಿನ ಅಧ್ಯಕ್ಷ ಎಚ್.ವಿ.ರಾಜೀವ್, ಆಯುಕ್ತ ಜಿ.ಟಿ.ದಿನೇಶ್‌ಕುಮಾರ್ ಭೇಟಿಯಾಗಿ ಅನುದಾನ ಕೇಳಿದ್ದೆವು. ಅನುದಾನ ಒದಗಿಸುವ ಭರವಸೆಯನ್ನು ಅವರು ನೀಡಿದ್ದಾರೆ.

ಡಿಪಿಆರ್ ತಯಾರಿಸುವಾಗ, ಆರೋಗ್ಯ ಕ್ಷೇತ್ರ, ಶಿಕ್ಷಣ, ಕೈಗಾರಿಕೆ ಮೊದಲಾದವುಗಳಿಗೆ ಅನುಕೂಲವಾಗುವಂತೆ ಅಲ್ಲಲ್ಲಿ ಕ್ಲಸ್ಟರ್‌ಗಳನ್ನು ಮಾಡುವಂತೆಯೂ ಸೂಚಿಸಿದ್ದಾರೆ. ಅದರಂತೆ ಡಿಪಿಆರ್ ವಿನ್ಯಾಸಗೊಳಿಸಲಾಗುತ್ತಿದೆ. ಇದಕ್ಕೆ ಬೆಂಗಳೂರುಮೈಸೂರು ಎಕ್ಸ್‌ಪ್ರೆಸ್ ವೇ ಯೋಜನಾ ನಿರ್ದೇಶಕ ಶ್ರೀಧರ್ ಅವರ ಸಹಕಾರವನ್ನೂ ಮುಡಾ ಅಧಿಕಾರಿಗಳಿಗೆ ಕೊಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ರಸ್ತೆ ಈಗಿರುವ ವರ್ತುಲ ರಸ್ತೆಯಿಂದ ಸರಾಸರಿ 5ರಿಂದ 20 ಕಿ.ಮೀ. ವ್ಯಾಪ್ತಿಯಲ್ಲಿ ಹಾದು ಹೋಗಬಹುದು. ಅದು ಜಾಗದ ಲಭ್ಯತೆಯನ್ನು ಆಧರಿಸಿರಲಿದೆ. ಒಟ್ಟು 102 ಕಿ.ಮೀ. ರಸ್ತೆ ಇರಲಿದೆ. ರಸ್ತೆಗಾಗಿ ಭೂಸ್ವಾಧೀನಕ್ಕಾಗಿ ಹಳ್ಳಿಗಳನ್ನು ಒಕ್ಕಲೆಬ್ಬಿಸಲು ಹೋದರೆ ಜನರು ವಿರೋಧ ಮಾಡುತ್ತಾರೆ. ಊರಿನ ಬಗ್ಗೆ ಜನರಿಗೆ ಭಾವನಾತ್ಮಕ ಸಂಬಂಧವಿರುತ್ತದೆ. ಅದಕ್ಕೆ ಧಕ್ಕೆ ಮಾಡಲಾಗದು. ಆದ್ದರಿಂದ ಹೊಲ ಗದ್ದೆಗಳಲ್ಲೇ (ಗ್ರೀನ್ ಫೀಲ್ಡ್) ಜಾಗ ಪಡೆಯಬೇಕಾಗುತ್ತದೆ. ಇದರಿಂದ ರೈತರಿಗೂ ಅನುಕೂಲವಾಗಲಿದೆ ಎಂದು ಹೇಳಿದರು.

ವರ್ತುಲ ರಸ್ತೆಯಲ್ಲಿ ಅಲ್ಲಲ್ಲಿ ಅಪಘಾತ ವಲಯಗಳು ನಿರ್ಮಾಣವಾಗಿದೆ. ಇದಿಲ್ಲದಂತೆ ಈ ಹೊಸ ರಸ್ತೆ ನಿರ್ಮಿಸಬೇಕಾಗುತ್ತದೆ. ಕೆಳಸೇತುವೆ, ಮೇಲ್ಸೇತುವೆ ಕಟ್ಟಬೇಕಾದ ಅಗತ್ಯ ಬರಬಾರದು. ಕೈಗಾರಿಕೆ ಅಭಿವೃದ್ಧಿಗೂ ಪೂರಕವಾಗಿರುವಂತೆ ಇರಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಮೈಸೂರಿನ ಭವಿಷ್ಯದ ದೃಷ್ಟಿಯಿಂದ ಇದು ಬಹಳ ಮಹತ್ವದ್ದಾಗಿದೆ. ಇಲ್ಲದಿದ್ದರೆ ನಗರವು ಮತ್ತೊಂದು ಬೆಂಗಳೂರು ಆಗಿಬಿಡುತ್ತದೆ. ಈಗಲೇ 40ರಿಂದ 50 ಎಕರೆ ಜಮೀನು ಕಾಯ್ದಿರಿಸಿ ಟೌನ್‌ಶಿಪ್ ನಿರ್ಮಾಣಕ್ಕೂ ಯೋಜಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಪೆರಿಫೆರಲ್ ವರ್ತುಲ ರಸ್ತೆ ಅಕ್ಕಪಕ್ಕದಲ್ಲಿ ಕ್ಲಸ್ಟರ್‌ಗಳನ್ನು ಮಾಡಿದರೆ ಮುಡಾಕ್ಕೆ ವರಮಾನವೂ ಬರುತ್ತದೆ. ಇದೆಲ್ಲವನ್ನೂ ಒಳಗೊಂಡು ಲೋಪದೋಷಗಳು ಇಲ್ಲದಿರುವಂತಹ ಡಿಪಿಆರ್ ಅನ್ನು ತಯಾರಿಸಿ, ಟೆಂಡರ್ ಪ್ರಕ್ರಿಯೆ ಆರಂಭಿಸಲಾಗುತ್ತದೆ ಎಂದು ಹೇಳಿದರು.

See also  ದೇಶದಲ್ಲಿ 3ನೇ ಅಲೆ ಬಂದರೂ ಸಾವು-ನೋವು ಸಂಭವಿಸಲಿಲ್ಲ : ಸಚಿವ ಡಾ.ಕೆ.ಸುಧಾಕರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು