News Kannada
Tuesday, February 07 2023

ಮೈಸೂರು

ಮೈಸೂರು: ನಾಗರಹೊಳೆ ಅರಣ್ಯದಲ್ಲಿ ಗುಂಡೇಟಿಗೆ ಕಾಡುಕೋಣ ಬಲಿ!

Photo Credit : By Author

ಮೈಸೂರು: ಕಾಡುಕೋಣ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾದ ಘಟನೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಆನೆಚೌಕೂರು ವನ್ಯಜೀವಿ ವಲಯದ ದೇವಮಚ್ಚಿ ಶಾಖೆಯ ಸಿಂಗನೂರು ಗಸ್ತಿನ ಮೈಸೂರು- ಗೋಣಿಕೊಪ್ಪ ಹೆದ್ದಾರಿಯ ಬಳಿ ನಡೆದಿದೆ.

ಸಾವನ್ನಪ್ಪಿದ ಕಾಡಾನೆ ಸುಮಾರು ಎಂಟು ವರ್ಷ ಪ್ರಾಯದಾಗಿದ್ದು, ಮರಣೋತ್ತರ ಪರೀಕ್ಷೆ ವೇಳೆ ಗುಂಡೇಟಿನಿಂದ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಕಾಡುಕೋಣವು ನಾಗರಹೊಳೆ ಉದ್ಯಾನದ ಆನೆಚೌಕೂರು ವನ್ಯಜೀವಿ ವಲಯದ ದೇವಮಚ್ಚಿ ಶಾಖೆಯ ಸಿಂಗನೂರು ಗಸ್ತಿನ ಮೈಸೂರು- ಗೋಣಿಕೊಪ್ಪ ಹೆದ್ದಾರಿಯ ಬಳಿ ಸತ್ತು ಬಿದ್ದಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ಅರಣ್ಯಾಧಿಕಾರಿಗಳು, ಪಶುವೈದ್ಯಾಧಿಕಾರಿಗಳು, ವಲಯ ಅರಣ್ಯಾಧಿಕಾರಿ, ದೇವಮಚ್ಚಿ, ಶಾಖೆ ಎಸ್.ಟಿ.ಪಿ.ಎಫ್ ಸಿಬ್ಬಂದಿ ಹಾಗೂ ಅರಣ್ಯ ರಕ್ಷಕರು ಭೇಟಿ ನೀಡಿ ಸ್ಥಳ ಪರಿಶೀಲಿಸಿದ್ದು, ಬಳಿಕ ಮರಣೋತ್ತರ ನಡೆಸಲಾಯಿತು. ಈ ವೇಳೆ ಕಾಡುಕೋಣ ಗುಂಡೇಟಿನಿಂದ ಮೃತಪಟ್ಟಿರುವುದು ದೃಢಪಟ್ಟಿದೆ.

ಈ ಸಂಬಂಧ ಅರಣ್ಯ ಇಲಾಖೆ ತನಿಖೆ ಕೈಗೊಂಡಿದ್ದು, ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ನಾಗರಹೊಳೆ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಮೇಯಲು ಹೋಗಿದ್ದ ಸಾಕಾನೆ ಮೇಲೆ ಗುಂಡು ಹಾರಿಸಿದ ಪ್ರಕರಣ ನಡೆದಿತ್ತು. ಇದೀಗ ಕಾಡುಕೋಣವನ್ನು ಗುಂಡು ಹಾರಿಸಿಕೊಲೆಗೈದಿರುವುದು ಬೆಳಕಿಗೆ ಬಂದಿದ್ದು, ಈ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕುಕೃತ್ಯವನ್ನು ಹತ್ತಿಕ್ಕಬೇಕಾಗಿದೆ ಎಂದು ಪ್ರಾಣಿ ಪ್ರಿಯರು ಒತ್ತಾಯಿಸಿದ್ದಾರೆ.

See also  ಸೂರತ್: ನವಜಾತ ಶಿಶುವನ್ನು ಅಪಾರ್ಟ್ ಮೆಂಟ್ ನಿಂದ ಎಸೆದ ತಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು