News Kannada
Wednesday, February 01 2023

ಮೈಸೂರು

ಸಂಚಾರ ನಿಮಯಗಳನ್ನು ಪ್ರತಿಯೊಬ್ಬರು ಚಾಚು ತಪ್ಪದೇ ಪಾಲಿಸಬೇಕು- ಯಾಸ್ಮಿನ್ ತಾಜ್

Everyone should follow traffic rules without fail: Yasmin Taj
Photo Credit : News Kannada

ನಂಜನಗೂಡು: ಸಂಚಾರ ನಿಮಯಗಳನ್ನು ಪ್ರತಿಯೊಬ್ಬರು ಚಾಚು ತಪ್ಪದೇ ಪಾಲಿಸಬೇಕು ಎಂದು ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಯಾಸ್ಮಿನ್ ತಾಜ್ ಹೇಳಿದರು.

ನಂಜನಗೂಡು ನಗರದ ಸಿಟಿಜನ್ ಕಾಲೇಜಿನಲ್ಲಿ ಸಂಚಾರಿ ಪೊಲೀಸ್ ಠಾಣೆಯ ವತಿಯಿಂದ ಆಯೋಜಿಸಿದ್ದ ಸಂಚಾರಿ ನಿಯಮಗಳ ಜಾಗೃತಿ ಕಾರ್ಯಕ್ರಮಕ್ಕೆ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಯಾಸ್ಮಿನ್ ತಾಜ್ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ಜೀವನ ಅಮೂಲ್ಯವಾದುದ್ದು, ರಸ್ತೆ ಸುರಕ್ಷತೆಗಾಗಿ ಅಳವಡಿಸಲಾಗಿರುವ ಸಂಚಾರಿ ನಿಯಮಗಳನ್ನು ಪಾಲಿಸುವುದರಿಂದ ಅನಾಹುತಗಳನ್ನು ತಡೆಯಬಹುದು. ಆದ್ದರಿಂದ ಸಂಚಾರಿ ನಿಯಮಗಳನ್ನು ಪಾಲಿಸಿ ದೀರ್ಘಾಯುಷಿಗಳಾಗಿ ಬಾಳಬೇಕು ಎಂದರು.

ವಿದ್ಯಾರ್ಥಿಗಳು ಡಿ.ಎಲ್ ಇಲ್ಲದೆ ಬೈಕ್ ಮುಟ್ಟಬಾರದು, ಪೋಷಕರು ಮಕ್ಕಳಿಗೆ ಬೈಕ್ ಅಥವಾ ಕಾರು ಕೊಡಬಾರದು, ದಂಡ ಮತ್ತು ಜೈಲು ಶಿಕ್ಷೆಗೆ ಗುರಿಯಾಗುತ್ತಾರೆ. ಕುಡಿದು ವಾಹನ ಚಲಾಯಿಸುವುದು ಅಥವಾ ಸಿಗ್ನಲ್ ಜಂಪ್‌ ಮಾಡುವುದನ್ನು ಮಾಡಬಾರದು. ಸೀಟ್‌ ಬೆಲ್ಟ್‌ ಹಾಕಿಕೊಳ್ಳುವುದು, ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್‌ ಧರಿಸುವ ಮೂಲಕ ಮುನ್ನಚ್ಚರಿಕೆ ಕ್ರಮಗಳನ್ನು ವಹಿಸಬೇಕು ಇಲ್ಲವಾದಲ್ಲಿ ದಂಡ ಮತ್ತು ಜೈಲು ಶಿಕ್ಷೆಗೆ ಒಳಪಡಿಸಲಾಗುತ್ತದೆ ಎಂದು ತಿಳಿಸಿದರು.

ಇನ್ನೂ ವಿದ್ಯಾರ್ಥಿಗಳಿಗೆ ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸ ಕರು ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

See also  ಮೈಸೂರು: ಅನಾರೋಗ್ಯ ಪತ್ತೆ ಹಚ್ಚಲು ವಿಶೇಷ ಯಂತ್ರ ಬಳಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು