ನಂಜನಗೂಡು: ತಾಲ್ಲೂಕಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಸೇರಿದಂತೆ ಅನೇಕ ವಿಷಯಗಳ ಕುರಿತಂತೆ ವಿದ್ಯಾಸಾಗರ್ ನೇತೃತ್ವದ ರೈತ ಸಂಘವು ಸೋಮವಾರ ಇಲ್ಲಿನ ತಾಲ್ಲೂಕು ಕಚೇರಿ ಮುಂಭಾಗ ಬೃಹತ್ ಹೋರಾಟ ಹಮ್ಮಿಕೊಂಡಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘದ ತಾಲ್ಲೂಕು ಅಧ್ಯಕ್ಷ ಸತೀಶ ರಾವ್, ಸೋಮವಾರ ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ನಂಜನಗೂಡು ತಾಲ್ಲೂಕು ಆಡಳಿತದ ಭ್ರಷ್ಟಾಚಾರ ಖಂಡಿಸಿ ತಹಸಿಲ್ದಾರ್ ವಿರುದ್ಧ ಪ್ರತಿಭಟನೆ ನಡೆಸಲಾ ಗುವುದು. ಆದ್ದರಿಂದ ತಹಸಿಲ್ದಾರ್‌ಗಿಂತ ಮೇಲ್ಪಟ್ಟ ಅಧಿಕಾರಿಗಳೇ ಪ್ರತಿಭಟನಾ ಸ್ಥಳಕ್ಕೆ ಆಗಮಿಸುವವರೆಗೂ ಪ್ರತಿಭಟನೆ ಮುಂದುವರಿಯಲಿದೆ ಎಂದು ಸತೀಶ್ ರಾವ್ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.