ಮೈಸೂರು: ನಗರದ ಆರ್‌ಬಿಐ ಹಿಂಭಾಗದ ಶ್ಯಾದನಹಳ್ಳಿ ಗ್ರಾಮದ ಹೊರವಲಯದಲ್ಲಿ ಸೋಮವಾರ ಮೂರು ವರ್ಷದ ಗಂಡು ಚಿರತೆಯನ್ನು ಸೆರೆಹಿಡಿಯಲಾಗಿದೆ.
ಶ್ಯಾದನಹಳ್ಳಿಯ ಹೊರವಲಯದಲ್ಲಿ ಚಿರತೆಗಳು ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದವು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಜಮೀನಿನಲ್ಲಿ ಬೋನು ಇಟ್ಟಿದ್ದರು. ಆಹಾರ ಹುಡುಕಿಕೊಂಡು ಬಂದ ಚಿರತೆ ಭಾನುವಾರ ರಾತ್ರಿ ಬೋನಿನಲ್ಲಿ ಸಿಕ್ಕಿಬಿದ್ದಿದ್ದು, ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಕೆ.ಸುರೇಂದ್ರ ಮತ್ತು ಸಿಬ್ಬಂದಿ ತಕ್ಷಣ ಸ್ಥಳಕ್ಕೆ ತಲುಪಿ ಸೆರೆಹಿಡಿದ ಚಿರತೆಯನ್ನು ಕಾಡಿಗೆ ಬಿಟ್ಟಿದ್ದಾರೆ.
ಮೂರು ದಿನಗಳ ಹಿಂದೆ ಮೈಸೂರು ನಗರದಲ್ಲಿ ಚಿರತೆಯೊಂದು ರಸ್ತೆ ದಾಟುತ್ತಿರುವ ವೀಡಿಯೊವನ್ನು ನೋಡಿದ ನಂತರ ಜನರು ಭಯಭೀತರಾಗಿದ್ದಾರೆ. ಮೈಸೂರಿನ ಆರ್.ಟಿ.ನಗರದ ಉರುಕಟೇಶ್ವರಿ ದೇವಸ್ಥಾನದ ಬಳಿ ಚಿರತೆ ಕಾಣಿಸಿಕೊಂಡಿದೆ.
ಚಿರತೆ ರಾತ್ರಿ ರಸ್ತೆ ಬದಿಯ ಗುಡ್ಡದ ಹಿಂಭಾಗದಿಂದ ದಾಟಿದೆ. ಈ ದೃಶ್ಯವನ್ನು ರಸ್ತೆಯಲ್ಲಿ ಹೋಗುತ್ತಿದ್ದ ನಿವಾಸಿಯೊಬ್ಬರು ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.