ನಂಜನಗೂಡು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ದುರಾಡಳಿತ ಮತ್ತು ವೈಪಲ್ಯದಿಂದಾಗಿ ಇಂದು ಮತದಾರರು ಕಾಂಗ್ರೆಸ್ ನತ್ತ ಮುಖ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ್ ತಿಳಿಸಿದರು.
ಇಂದು ನಂಜನಗೂಡಿನಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ ರಥಯಾತ್ರೆಯ ಸಂಬಂಧ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇದೇ ತಿಂಗಳು 20ರಂದು ಸಂಜೆ 5ಗಂಟೆಗೆ ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಪಟ್ಟಣದ ವಿದ್ಯಾವರ್ಧಕ ಶಾಲಾ ಮೈದಾನದಲ್ಲಿ ಪ್ರಜಾದ್ವನಿ ಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಪಟ್ಟಣವು ಸೇರಿದಂತೆ ಗ್ರಾಮಾಂತರ ಪ್ರದೇಶಗಳಿಂದ ಕಾರ್ಯಕರ್ತ ಮುಖಂಡರು, ಮಹಿಳೆಯರು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿಕೊಂಡು
ರಾಜ್ಯದಲ್ಲಿ ಬಿಜೆಪಿ ಸೋಲಿಸುವುದೇ ಕಾಂಗ್ರೆಸ್ ನ ಗುರಿಯಾಗಿದೆ ಎಂದರು.
ಅಲ್ಲದೆ ನಂಜನಗೂಡಿನಲ್ಲೂ ಬಿಜೆಪಿ ಶಾಸಕರ ವಿರುದ್ಧ ವಿರೋಧಿ ಅಲೆ ಹೆಚ್ಚಾಗಿದ್ದು ಈ ಬಾರಿ ಕಾಂಗ್ರೆಸ್ ಗೆಲುವು ನಿಶ್ಚಿತ ಹಾಗಾಗಿ ಕಾಂಗ್ರೆಸ್ ಕಾರ್ಯಕರ್ತ ಮುಖಂಡರು ಇದರ ಸದುಪಯೋಗ ಪಡೆದುಕೊಂಡು ಒಗ್ಗಟ್ಟಾಗಿ ಕಾರ್ಯನಿರ್ವಹಿಸುವಂತೆ ಕಿವಿ ಮಾತು ಹೇಳಿದರು.