News Kannada
Tuesday, March 21 2023

ಮೈಸೂರು

40 ಪರ್ಸೆಂಟ್ ಬಿಜೆಪಿ ಭ್ರಷ್ಟಾಚಾರದಿಂದ ರಾಜ್ಯದ ಜನತೆ ನೊಂದಿದ್ದಾರೆ- ಡಿಕೆಶಿ

People of The State Are Suffering Due To 40% Corruption Of BJP: DK Shivakumar
Photo Credit : News Kannada

ನಂಜನಗೂಡು: 40 ಪರ್ಸೆಂಟ್ ಬಿಜೆಪಿ ಭ್ರಷ್ಟಾಚಾರದಿಂದ ರಾಜ್ಯದ ಜನತೆ ನೊಂದಿದ್ದಾರೆ. ರಾಜ್ಯದ ಜನರು ಅಭಿವೃದ್ಧಿಯನ್ನು ಬಯಸಿದ್ದಾರೆ. ಅದಕ್ಕಾಗಿ ಜನರು ಬದಲಾವಣೆಯನ್ನು ಬಯಸಿ ಕಾಂಗ್ರೆಸ್‌ನತ್ತ ಮುಖ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು .

ನಂಜನಗೂಡಿನಲ್ಲಿ ಸೋಮವಾರ ರಾತ್ರಿ ನಡೆದ ‘ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಮಾತ ನಾಡಿದ ಅವರು , ಬದಲಾವಣೆಗೆ ನಂಜನಗೂಡಿಗರೂ ಸಿದ್ಧರಾಗಿದ್ದಾರೆ ಎಂಬುದಕ್ಕೆ ಇಲ್ಲಿ ಸೇರಿರುವ ಜನರೇ ಸಾಕ್ಷಿಯಾಗಿದ್ದಾರೆ . ಬಿಜೆಪಿ ತನ್ನ ಪ್ರಾಣಾಳಿಕೆಯಲ್ಲಿ ನೀಡಿದ ಪೊಳ್ಳು ಭರವಸೆಗಳಿಂದ ಬೇಸತ್ತಿದ್ದಾರೆ ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂ ಹಾಕುವುದಾಗಿ ಹೇಳಿದ ಪ್ರಧಾನಿಯವರ ಮಾತು ಹುಸಿಯಾಗಿದೆ . ಇನ್ನು ಕೆಲವೇ ದಿನಗಳು ಮಾತ್ರ ಅಧಿಕಾರದಲ್ಲಿ ರುವ ನಿಮ್ಮ ಶಾಸಕರಲ್ಲಿ , ರಾಜ್ಯದ ಮುಖ್ಯಮಂತ್ರಿ ಗಳಲ್ಲಿ ಈ ಬಗ್ಗೆ ಪ್ರಶ್ನಿಸಿ ಎಂದು ಹೇಳಿದರು.

ಸಭೆಯಲ್ಲಿ ನೆರೆದಿದ್ದ ಜನರು ಅಭ್ಯರ್ಥಿಯನ್ನು ಇಲ್ಲೇ ಘೋಷಿಸಿ ಎಂದು ಒತ್ತಾಯಿಸಿದಾಗ ಗುಟ್ಟು ಬಿಡದ ರಾಜಾಧ್ಯಕರು ಇಲ್ಲಿ ನಾನೇ ಅಭ್ಯರ್ಥಿ , ಸಿದ್ದರಾಮಯ್ಯನವರೇ ಅಭ್ಯರ್ಥಿ ಎಂಬ ಮನೋಭಾವವನ್ನು ಇಟ್ಟು ಕೊಂಡು ನಿಮ್ಮ ಮತವನ್ನು ಕಾಂಗ್ರೆಸ್‌ಗೆ ನೀಡಿ ಎಂದು ಹೇಳಿದರು .

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್, ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಜರಿದ್ದರು.

See also  ಮುಂಬಯಿ: ಚಾರ್ಕೋಪ್ ಕನ್ನಡಿಗರ ಬಳಗದ ಎಂ.ಎಸ್ ರಾವ್ ನಿಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು