News Kannada
Wednesday, March 29 2023

ಮೈಸೂರು

ನಂಜನಗೂಡು: ಭೂಮಿ ಕಳೆದುಕೊಂಡ ರೈತ ಮಕ್ಕಳಿಗೆ ಉದ್ಯೋಗ ನೀಡುವಂತೆ ರೈತರ ಒತ್ತಾಯ

Nanjangud: Farmers are demanding employment for the children of farmers who have lost their land.
Photo Credit : News Kannada

ನಂಜನಗೂಡು: ಭೂಮಿ ಕಳೆದುಕೊಂಡ ರೈತ ಮಕ್ಕಳಿಗೆ ಉದ್ಯೋಗ ನೀಡುವಂತೆ ರೈತರ ಒತ್ತಾಯಿಸಿ ಕಡಕೋಳ ಕೈಗಾರಿಕಾ ಪ್ರದೇಶದಲ್ಲಿರುವ ಆಟೋ ಲಿವ್ ಇಂಡಿಯಾ ಪ್ರೈ ಲಿಮಿಟೆಡ್ ಕಾರ್ಖಾನೆಯ ವಿರುದ್ಧ ಪ್ರತಿಭಟನೆ ನಡೆಸಿದರು.

ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಸಂಘಟನೆಯ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಮೈಸೂರು ತಾಲೂಕಿನ ಕೆ.ಎಂ.ಹುಂಡಿ ಮತ್ತು ಕಡಕೋಳ ಗ್ರಾಮಗಳ ರೈತರ ಹಸು, ಎತ್ತಿನ ಗಾಡಿಯನ್ನು ತಂದು ಕಾರ್ಖಾನೆ ಒಳಗೆ ಬಿಡುತ್ತೇವೆ ಎಂದು ಆಕ್ರೋಶ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.

ಕಳೆದ ಒಂದು ವರ್ಷಗಳಿಂದ ಕೆಲಸ ನೀಡಿದ ಸತಾಯಿಸುತ್ತಿದ್ದಾರೆ. ಸುಮಾರು 12 ಕುಟುಂಬಗಳ ರೈತ ಮಕ್ಕಳಿಗೆ ಕಾಯಂ ಉದ್ಯೋಗ ನೀಡಬೇಕು. ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ನೀಡಬೇಕು ಇಲ್ಲವಾದಲ್ಲಿ ರೈತರಿಗೆ ಭೂಮಿ ಬಿಟ್ಟು ಕೊಡಬೇಕು. ನಮ್ಮ ಭೂಮಿ ನಮಗೆ ವಾಪಸ್ ಕೊಡಿ ಇಲ್ಲದಿದ್ದರೆ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ರೈತರ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ವಿದ್ಯಾಸಾಗರ್, ತಾಲೂಕು ಅಧ್ಯಕ್ಷ ಸತೀಶ್ ರಾವ್, ಪ್ರಧಾನ ಕಾರ್ಯದರ್ಶಿ, ಇಮ್ಮಾವು ರಘು, ಮಾಧ್ಯಮ ಕಾರ್ಯದರ್ಶಿ ಮಂಜು ಕಿರಣ್, ಜಿಲ್ಲಾ ಸಂಚಾಲಕ ಕುಮಾರ್ ಬಸಪ್ಪ ಸೇರಿದಂತೆ ರೈತ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದರು.

See also  ಪ್ರಕೃತಿ ಆರಾಧನೆಯ ಹಬ್ಬ 'ಮೊಂತಿ ಫೆಸ್ತ್'
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು