ನಂಜನಗೂಡು: ನಗರದ ಚಿಂತಾಮಣಿ ಗಣಪತಿ ದೇವಾಲಯದ ಬಳಿ ಮಾಜಿ ಸಚಿವ ಈಶ್ವರಪ್ಪ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಹಾಗೂ ಶಾಸಕ ಬಿ ಹರ್ಷವರ್ಧನ್ ವಿಜಯ ಸಂಕಲ್ಪ ಯಾತ್ರೆಯ ರೋಡ್ ಶೋಗೆ ಚಾಲನೆ ನೀಡಿದರು.
ಇದಕ್ಕೂ ಮುನ್ನ ನಗರದ ದೇವಿರಮ್ಮನಹಳ್ಳಿ ಗೇಟ್ ಬಳಿ ಅದ್ದೂರಿಯಾಗಿ ಸ್ವಾಗತ ಮಾಡಲಾಯಿತು. ರಾಷ್ಟ್ರಪತಿ ರಸ್ತೆಯ ಮೂಲಕ ಹೊರಟ ಯಾತ್ರೆಯು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆಯನ್ನು ಸಲ್ಲಿಸಿದರು. ರೋಡ್ ಶೋ ದಲ್ಲಿ ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಿ ಮತ್ತಷ್ಟು ಮೆರುಗು ತಂದಿವೆ.
ಮಜ್ಜಿಗೆ ಕುಡಿಯಲು ಬಿಜೆಪಿ ಕಾರ್ಯಕರ್ತರು ಮುಗಿಬಿದ್ದಿರುವುದು ಕಂಡು ಬಂತು. ಸಂಸದ ವಿ.ಶ್ರೀನಿವಾಸಪ್ರಸಾದ್ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಗೈರು. ಶಾಸಕ ಬಿ ಹರ್ಷವರ್ಧನ್ ರವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಮಾತನಾಡಿದ ಅವರು, ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಇತಿಹಾಸವಾಗಿದೆ. ಸುಮಾರು ಹತ್ತಕ್ಕೂ ಸಾವಿರ ಹೆಚ್ಚು ಜನರು ಆಗಮಿಸಿದ್ದಾರೆ. ಬಿಜೆಪಿ ಪಕ್ಷಕ್ಕೆ ಬೆಂಬಲ ಸೂಚಿಸಿದ್ದಾರೆ ಮತ್ತೆ ನಾವು ಬಿಜೆಪಿ ಸರ್ಕಾರ ಬರುತ್ತದೆ ನಂಜನಗೂಡಿನಲ್ಲಿ ಬಿಜೆಪಿ ಬಾವುಟವನ್ನು ಹಾರಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಸೇರಿದಂತೆ ಪಕ್ಷದ ಮುಖಂಡರು ಭಾಗವಹಿಸಿದರು.