ನಂಜನಗೂಡು: ತಾಲೂಕಿನ ಕಾಳಿಹುಂಡಿ ಗ್ರಾಮದಲ್ಲಿ ಪ್ರಥಮ ಬಾರಿಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಿಸಲಾಯಿತು.
ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಧ್ರುವನಾರಾಯಣ್ ನೇತೃತ್ವದಲ್ಲಿ ಗ್ರಾಮದ ಮಹಿಳೆಯರಿಗೆ ಕಾರ್ಡ್ ವಿತರಿಸಲಾಯಿತು.
ಕಾಂಗ್ರೆಸ್ ಪಕ್ಷದ ಪ್ರಮುಖ ಪ್ರಣಾಳಿಕೆಗಳು ಹಾಗೂ ಭರವಸೆಗಳಾದ ಗೃಹ ಜ್ಯೋತಿ, ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯದ ಖಾತರಿ ಕಾರ್ಡ್‌ಗಳನ್ನು ವಿತರಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷ ಹಾಗಾಗಿ ಈ ಬಾರಿ ಮೂರು ಪ್ರಮುಖ ಪ್ರಣಾಳಿಕೆ ಹಾಗೂ ಭರವಸೆಗಳನ್ನು ನೀಡುತ್ತಿದ್ದೇವೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಭ್ರಷ್ಟ ಬಿಜೆಪಿ ಸರ್ಕಾರವನ್ವು ಕಿತ್ತೊಗೆಯಿರಿ ಎಂದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕೆಪಿಸಿಸಿ ಕಾರ್ಯದರ್ಶಿ ಶ್ರೀಕಂಠು, ನಂಜನಗೂಡು ಉಸ್ತುವಾರಿ ಸೋಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕುರಟ್ಟಿ ಮಹೇಶ್, ಶ್ರೀಕಂಠ ನಾಯಕ, ಶಂಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕರಳಪುರ ನಾಗರಾಜ್, ಮುಖಂಡರಾದ ನಾಗೇಶ್ ರಾಜ್. ಮಾರುತಿ ದೊರೆಸ್ವಾಮಿ ನಾಯಕ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.