ಮೈಸೂರು: ನಾಯಿಗಳ ತಳಿ ಸಂವರ್ಧನೆ, ಮಾರಾಟ ಹಾಗೂ ಮುದ್ದಿನ ಪ್ರಾಣಿಗಳ ಮಳಿಗೆ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿ ಅಥವಾ ಸಂಸ್ಥೆಗಳು ಇನ್ನು ಮುಂದೆ ನೋಂದಣಿ ಮಾಡುವುದು ಕಡ್ಡಾಯವಾಗಿದೆ.
ನಾಯಿಗಳ ಸಾಕಾಣಿಕೆ ಕುರಿತಂತೆ ಮಾಲೀಕರು ಸ್ಥಳೀಯ ಸಂಸ್ಥೆಗಳಿಂದ ಪರವಾನಗಿ ಪಡೆಯುವ ಮುನ್ನ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆ (ನಾಯಿ ತಳಿ ಸಂವರ್ಧನೆ ಮತ್ತು ಮಾರಾಟ ನಿಯಮ-2017 ಮತ್ತು ಮುದ್ದಿನ ಪ್ರಾಣಿ ಮಳಿಗೆ ನಿಯಮ 2018 ರ ಸೆಕ್ಷನ್ 3, 4 ಮತ್ತು 5 ರ) ಅಡಿಯಲ್ಲಿ ನೋಂದಣಿ ಮಾಡಿಸ ಬೇಕಾಗುತ್ತದೆ.
ನಾಯಿಗಳ ತಳಿ ಸಂವರ್ಧನೆ, ಮಾರಾಟ ಹಾಗೂ ಮುದ್ದಿನ ಪ್ರಾಣಿಗಳ ಮಳಿಗೆ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿ, ಸಂಸ್ಥೆಗಳು ಈ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿನದೊಳಗೆ ಭರ್ತಿ ಮಾಡಿದ ನಮೂನೆಯಲ್ಲಿ ಅಗತ್ಯ ದಾಖಲಾತಿಗಳು ಹಾಗೂ ನಿಗದಿಪಡಿಸಿದ ಶುಲ್ಕದೊಂದಿಗೆ ನೋಂದಣಿ ಕೋರಿ ಜಿಲ್ಲಾ ಪ್ರಾಣಿದಯಾ ಸಂಘದ ಉಪನಿರ್ದೇಶಕರು ಹಾಗೂ ಕಾರ್ಯದರ್ಶಿಗಳ ಕಚೇರಿ ಅಥವಾ ಧನ್ವಂತರಿ ರಸ್ತೆಯ ಪಶುಪಾಲನಾ ಇಲಾಖೆಗೆ ಸಲ್ಲಿಸಬೇಕು. ತಪ್ಪಿದಲ್ಲಿ ಅಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:080-29901411ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪ್ರಾಣಿದಯಾ ಸಂಘದ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.