ನಂಜನಗೂಡು: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ನಂಜನಗೂಡಿನಲ್ಲಿ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
ಕಾಂಗ್ರೆಸ್ ಕಛೇರಿಯಿಂದ ಹುಲ್ಲಹಳ್ಳಿ ವೃತ್ತದವರೆಗೂ ಪಾದಯಾತ್ರೆ ಮೂಲಕ ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಸರ್ಕಾರ ದಿನೇ ದಿನೇ ಗ್ಯಾಸ್ ಸಿಲಿಂಡರ್ ಬೆಲೆಯನ್ನು ನಿರಂತರವಾಗಿ ಏರಿಕೆ ಮಾಡುತ್ತಿದೆ ಇದರಿಂದ ಸಾಮಾನ್ಯ ವರ್ಗದ ಜನರಿಗೆ ತೆಗೆದುಕೊಳ್ಳಲು ತೊಂದರೆಯಾಗಿದೆ ಬೆಲೆಯನ್ನು ಕಡಿಮೆ ಮಾಡಬೇಕು ಎಂದು ಒತ್ತಾಯ ಮಾಡಿದರು. ಬಳಿಕ ತಹಶೀಲ್ದಾರ್ ಶಿವಮೂರ್ತಿ ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಗ್ರಾಮಾಂತರ ಕಾಂಗ್ರೆಸ್ಸಿನ ಅಧ್ಯಕ್ಷೆ ಲತಾ ಸಿದ್ದಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿ ಜಯಮಾಲಾ ನಗರ ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷೆ ಸೌಭಾಗ್ಯ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶಶೀರೇಖಾ ಹಾಗೂ ಪುಷ್ಪ ನಾಗೇಶ್ ರಾಜ್ ರವರು ಪುರಸಭೆಯ ಸದಸ್ಯರಾದ ಶ್ವೇತಾ ಸತೀಶ್, ಪ್ರತಿಭಟನೆಯಲ್ಲಿ ಮಹಿಳಾ ಮುಖಂಡರು ಭಾಗವಹಿಸಿದರು.