ನಂಜನಗೂಡು:.ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷ ಆರ್ ಧ್ರುವನಾರಾಯಣ್ ನಿಧನ ಹಿನ್ನೆಲೆಯಲ್ಲಿ ನಂಜನಗೂಡಿನ ರಾಷ್ಟ್ರಪತಿ ರಸ್ತೆಯಲ್ಲಿರುವ ಕಾಂಗ್ರೆಸ್ ಕಛೇರಿಯಲ್ಲಿ ಅಂತಿಮ ದರ್ಶನಕ್ಕೆ ಶಾಮಿಯಾನ ಹಾಕಿ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ನಂಜನಗೂಡಿನಿಂದ ಚಾಮರಾಜನಗರ ನಗರಕ್ಕೆ ಕೊಂಡೊಯ್ಯಲಾಗುವುದುನಂಜನಗೂಡು ನಗರದ ಹುಲ್ಲಹಳ್ಳಿ ವೃತ್ತದಿಂದ ರಾಷ್ಟ್ರಪತಿ ರಸ್ತೆಯ ಮೂಲಕ ಚಾಮರಾಜನಗರಕ್ಕೆ ಪಾರ್ಥಿವ ಶರೀರ ಕೊಂಡೊಯ್ಯಲಾಗುವುದು.
ಮತ್ತೊಂದಡೆ ಅಭಿಮಾನಿಗಳು ಆರ್. ಧ್ರುವನಾರಾಯಣ್ ರವರ ಪ್ಲೇಕ್ಸ್ ಅಳವಡಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದು ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದ್ದು ಧ್ರುವ ನಾರಾಯಣ್ ರವರನ್ನ ನೆನೆದು ಕಣ್ಣೀರು ಹಾಕುತ್ತಿದ್ದಾರೆ.