ಮೈಸೂರು: ಗ್ಲೋಬಲ್ ಎಜುಕೇಶನ್ ಟ್ರಸ್ಟ್ ಹಾಗೂ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ದಕ್ಷ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಡಾ.ಪಿ. ಜಯಚಂದ್ರ ರಾಜು ಅವರ ‘ಇಂಡಿಯಾ ಅಂಡ್ ದಿ ಯುನೈಟೆಡ್ ನೇಷನ್ಸ್’ ಆಗ್ಲಭಾಷಾ ಪುಸ್ತಕ ಲೋಕಾರ್ಪಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು ಮಾ. 18 ರಂದು ಮಧ್ಯಾಹ್ನ 3 ಗಂಟೆಗೆ ಹೂಟಗಳ್ಳಿಯ ದಕ್ಷ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ಗುಣವಂತ ಮಂಜು ತಿಳಿಸಿದ್ದಾರೆ.
ಕರ್ನಾಟಕ ಲೋಕಾಯುಕ್ತದ ವಿಶ್ರಾಂತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಪುಸ್ತಕ ಲೋಕಾರ್ಪಣೆ ಮಾಡಲಿದ್ದು, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಆಯುಕ್ತ ಹಾಗೂ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ತಿನ ಮಾಜಿ ಸದಸ್ಯ ಹಾಗೂ ಸಾಹಿತಿ ಡಿ.ಎಸ್. ವೀರಯ್ಯ ಉದ್ಘಾಟಿಸುವರು. ಪಂಚಾಂಗಕರ್ತರಾದ ಡಾ. ಮೂಗೂರು ಮಧು ದೀಕ್ಷಿತ್ ಗುರೂಜಿ ದಿವ್ಯ ಸಾನಿಧ್ಯ ವಹಿಸುವರು.
ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಎಸ್.ಎ. ಮೋಹನ್ ಕೃಷ್ಣ ಪುಸ್ತಕ ಪರಿಚಯ ಮಾಡುವರು. ಸ್ಪಂದನ ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷ ಟಿ. ಸತೀಶ್ ಜವರೇಗೌಡ, ಸಾಹಿತಿ ಡಾ. ಎಸ್. ಅಕ್ಬರ್ ಪಾಷ, ಪದ್ಮಶ್ರೀ ಪ್ರೊ. ದೊಡ್ಡ ರಂಗೇಗೌಡ ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ಗೋವಿಂದಹಳ್ಳಿ ಕೃಷ್ಣೇಗೌಡ, ಕಿರುತೆರೆ ನಟಿ ಭಾರತಿ ಹೆಗಡೆ ಮುಖ್ಯ ಅತಿಥಿಗಳಾಗಿ ಪಾಲ್ಗೊಳುವರು. ಅಬಕಾರಿ ಇಲಾಖೆಯ ಉಪ ಆಯುಕ್ತ ಡಾ. ಬಸವಲಿಂಗಯ್ಯ ಹಿರೇಮಠ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.