ನಂಜನಗೂಡು: ರಸ್ತೆ ಮಧ್ಯದಲ್ಲಿದ್ದ ಆಲದ ಮರಕ್ಕೆ ಬೈಕ್ ಡಿಕ್ಕಿಯಾಗಿ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಗಣೇಶ್ ಪುರ ಗ್ರಾಮದಲ್ಲಿ ನಡೆದಿದೆ.
ನಂಜನಗೂಡು ತಾಲೂಕಿನ ಚನ್ನಪಟ್ಟಣ ಗ್ರಾಮದ ಬೆಳ್ಳಯ್ಯ ಎಂಬುವವರ ಪುತ್ರ 23 ವರ್ಷದ ಸಂತೋಷ್ ಮೃತ ದುರ್ದೈವಿ .
ಹೆಡಿಯಾಲ ಮತ್ತು ಬೇಗೂರು ಮುಖ್ಯ ರಸ್ತೆಯ ಮಧ್ಯದಲ್ಲಿದ್ದ ಆಲದ ಮರದ ರೆಂಬೆಗೆ ನಿಯಂತ್ರಣ ತಪ್ಪಿ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸಂತೋಷ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ರಸ್ತೆ ಡಾಂಬರೀಕರಣ ಮಾಡುವಾಗ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ರಸ್ತೆ ಮಧ್ಯದಲ್ಲಿದ್ದ ಮರಗಳನ್ನು ತೆರವುಗೊಳಿಸಿಲ್ಲ ಹಾಗೇಯೇ ರಸ್ತೆ ಕಾಮಗಾರಿ ಪೂರ್ಣಗೊಳಿಸಿದ್ದಾರೆ. ಇದರಿಂದ ಅಪಘಾತ ಸಂಭವಿಸಿದೆ ಇಂತಹ ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಂದು ಗ್ರಾಮಸ್ಥರು ಒತ್ತಾಯ ಮಾಡಿದ್ದರು.
ವಿಷಯ ತಿಳಿದು ಸ್ಥಳಕ್ಕೆ ಹುಲ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಶವವನ್ನು ಮರಣೋತ್ತರ ಪರೀಕ್ಷೆಗೆ ನಂಜನಗೂಡು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.