ನಂಜನಗೂಡು: ಕಳಪೆ ರಸ್ತೆ ಕಾಮಗಾರಿ ಖಂಡಿಸಿ ನಂಜನಗೂಡಿನಲ್ಲಿ ಜನಸಂಗ್ರಾಮ ಪರಿಷತ್ ನಿಂದ ಪ್ರತಿಭಟನೆ ನಡೆಸಲಾಯಿತು.
ನಂಜನಗೂಡು ನಗರದ ಗೌತಮ ಬಡಾವಣೆಯಲ್ಲಿ ಗೌತಮ ಬಡಾವಣೆ ಮತ್ತು ಬುದ್ಧ ನಗರ ನಿವಾಸಿಗಳ ಹೋರಾಟ ಸಮಿತಿ ಮತ್ತು ಜನಸಂಗ್ರಾಮ ಪರಿಷತ್ತಿನಿಂದ ಪ್ರತಿಭಟನೆ ನಡೆಸಲಾಗಿದ್ದು, ಅಧಿಕಾರಿಗಳ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಜನಸಂಗ್ರಾಮ ಪರಿಷತ್ ರಾಜ್ಯಾಧ್ಯಕ್ಷ ನಗರ್ಲೆ ಎಂ ವಿಜಯಕುಮಾರ್ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ಕಾಮಗಾರಿಯನ್ನು ಮಾಡುತ್ತಿದ್ದಾರೆ ಆದರೆ ಇನ್ನೂ ಸಹ ಪೂರ್ಣಗೊಂಡಿಲ್ಲ ಯುಜಿಡಿ ಕಾಮಗಾರಿಗೆ ರಸ್ತೆಯನ್ನು ಹಗೆದು ಹಾಗೆ ಬಿಟ್ಟು ಹೋಗಿದ್ದಾರೆ ಚರಂಡಿಯ ಕೊಳಚೆ ನೀರು ಸರಾಗವಾಗಿ ಹರಿದು ಹೋಗುತ್ತಿಲ್ಲ ಈ ಬಗ್ಗೆ ನಗರ ಸಭೆಯ ಅಧಿಕಾರಿಗಳನ್ನು ಕೇಳಿದರೆ ಮೂಡದವರನ್ನು ಕೇಳಿ ಎಂದು ಉಡಾಫೆಯಿಂದ ಉತ್ತರಿಸುತ್ತಾರೆ ಹಳೇ ಚರಂಡಿಗಳಿಗೆ ಬಿಲ್ ಮಾಡಿಕೊಳ್ಳುತ್ತಿದ್ದಾರೆ ಹುಲ್ಲಹಳ್ಳಿ ರಸ್ತೆಯಿಂದ ಸಿಟಿಜನ್ ಶಾಲೆಯ ಹಿಂಬದಿಯ ದೇವರಮ್ಮನ ಹಳ್ಳಿ ರಸ್ತೆಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ ಅಕ್ರಮವಾಗಿ ಮನೆಗಳನ್ನು ನಿರ್ಮಾಣ ಮಾಡಿದ್ದಾರೆ ಇದನ್ನು ನಗರಸಭೆ ಅಧಿಕಾರಿಗಳು ತೆರವುಗೊಳಿಸಿಲ್ಲ ಚರಂಡಿ ಮತ್ತು ಕಾಂಕ್ರೀಟ್ ರಸ್ತೆಯನ್ನು ಇನ್ನು 15 ದಿನಗಳ ಒಳಗೆ ನಮ್ಮ ಬೇಡಿಕೆ ಈಡೇರಿಸದೆ ಇದ್ದಲ್ಲಿ ನಗರಸಭೆಗೆ ಮುತ್ತಿಗೆ ಹಾಕಿ, ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಹಾಗೂ ಇಬ್ಬರು ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯ ಮಾಡಿದರು.
ಇನ್ನೂ ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಚುಂಚನಹಳ್ಳಿ ಮಲ್ಲೇಶ್, ಮಲ್ಲಹಳ್ಳಿ ನಾರಾಯಣ್, ರಂಗಸ್ವಾಮಿ, ರಮೇಶ್, ಆನಂದ್, ಗುರುಸಿದ್ದಯ್ಯ ಸೇರಿದಂತೆ ನಿವಾಸಿಗಳು ಭಾಗವಹಿಸಿದ್ದರು.