ನಂಜನಗೂಡು: ಬಿಜೆಪಿ ಸರ್ಕಾರದ ವಿರುದ್ಧ ಯಾರು ಮಾಡುತ್ತಾರೋ ಅಂಥವರ ಧ್ವನಿಯನ್ನು ದಮನ ಮಾಡುವ ಹುನ್ನಾರವನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ನಂಜನಗೂಡು ತಾಲೂಕಿನ ಹುಳಿಮಾವು ಗ್ರಾಮದಲ್ಲಿ ಕಟ್ಟಡ ಕಾರ್ಮಿಕರ ಕಾರ್ಡ್ ವಿತರಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ವಿರುದ್ಧ ವಾಕ್ ಸಮರ ನಡೆಸಿದ್ದಕ್ಕೆ ಬಿಜೆಪಿ ಸರ್ಕಾರ ರಾಹುಲ್ ಗಾಂಧಿಯವರ ವಿರುದ್ಧ ದೂರು ನೀಡಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಅವರ ಲೋಕಸಭಾ ಸದಸ್ಯತ್ವವನ್ನು ವಜಾಗೊಳಿಸಿರುವುದು ಅಕ್ಷಮ್ಯ ಅಪರಾಧ ಇದನ್ನು ತೀವ್ರವಾಗಿ ಖಂಡಿಸುತ್ತೇವೆ.
ಕೇಂದ್ರ ಬಿಜೆಪಿ ಸರ್ಕಾರ ತಮ್ಮ ತಪ್ಪುಗಳನ್ನು ಮರೆ ಮಾಚಲು ಹಾಗೂ ಜನರ ಗಮನವನ್ನು ಬೇರಡೆ ಸೆಳೆಯಲು ರಾಹುಲ್ ಗಾಂಧಿ ಅವರನ್ನು ಹಾಗೂ ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಟ್ಟುಕೊಡು ಯಾರು ಬಿಜೆಪಿ ವಿರುದ್ಧ ತಿರುಗಿ ಬೀಳುತ್ತಾರೋ ಅಂಥವರ ಧ್ವನಿಯನ್ನು ದಮನ ಮಾಡಲು ಹೊರಟಿದ್ದಾರೆ ರಾಹುಲ್ ಗಾಂಧಿ ಜೊತೆ ಪಕ್ಷದ ಕಾರ್ಯಕರ್ತರಿದ್ದಾರೆ. ಈ ಎಲ್ಲ ವಿಚಾರಗಳನ್ನು ಜನತಾ ನ್ಯಾಯಾಲಯದಲ್ಲಿ ತಿಳಿಸುತ್ತೇವೆ ಜನರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ತಿಳಿಸಿದರು.