ನಂಜನಗೂಡು: ತಾಲೂಕಿನ ವರುಣ ವಿಧಾನಸಭಾ ಕ್ಷೇತ್ರದ ಸುತ್ತೂರು ಗ್ರಾಮದ ಮಠಕ್ಕೆ ನಂಜನಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್ ಭೇಟಿ ನೀಡಿದರು.
ಸುತ್ತೂರು ಶ್ರೀ ಮಠಕ್ಕೆ ಆಗಮಿಸಿ, ಶ್ರೀ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿಯ ಆಶೀರ್ವಾದ ಪಡೆದಿದ್ದಾರೆ. ಬಳಿಕ ಸುತ್ತೂರು ಶ್ರೀ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿ ಮಾತನಾಡಿ, ಧ್ರುವನಾರಾಯಣ್ ರವರನ್ನು ಕಳೆದುಕೊಂಡು ತುಂಬಲಾರದ ನಷ್ಟ ಉಂಟಾಗಿದೆ. ಅವರ ತತ್ವ ಆದರ್ಶದಲ್ಲಿ ನೀವು ನಿಮ್ಮ ತಂದೆಯಂತೆಯೇ ಮುಂದುವರಿಯಬೇಕು ಎಂದು ಹಾರೈಸಿದರು.
ದರ್ಶನ್ ಧ್ರುವನಾರಾಯಣ್ ಮಾತನಾಡಿ, ನಮ್ಮ ತಂದೆಯವರಿಗೆ ಬೆನ್ನೆಲುಬಾಗಿ ನಿಂತುಕೊಂಡು ಸಹಕಾರ ನೀಡಿದ್ದೀರಿ. ಅದೇ ರೀತಿ ನನಗೂ ಕ್ಷೇತ್ರದ ಆಶೀರ್ವಾದ ಮಾಡಿ, ಬೆಂಬಲ ನೀಡಬೇಕು ಎಂದು ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಚಾಮರಾಜನಗರ ಜಿಲ್ಲಾ ಅಧ್ಯಕ್ಷ ಮರಿಸ್ವಾಮಿ, ಮಾಜಿ ಜಿಪಂ ಸದಸ್ಯೆ ಲತಾಸಿದ್ದಶೆಟ್ಟಿ, ಮಾಜಿ ತಾಪಂ ಅಧ್ಯಕ್ಷ ನಾಗೇಶ್ ರಾಜ್, ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.