ನಂಜನಗೂಡು: ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಆರ್. ಮಾದೇಶ್ ಚುನಾವಣಾ ಪ್ರಚಾರ ನಡೆಸಿದರು.
ಗ್ರಾಮದ ಶ್ರೀ ಶಾಂತ ಮಲ್ಲಿಕಾರ್ಜುನ ಮಠಕ್ಕೆ ಭೇಟಿ ನೀಡಿ, ಶ್ರೀ ಇಮ್ಮಡಿ ಚೆನ್ನಮಲ್ಲದೇಶಿಕೇಂದ್ರ ಸ್ವಾಮೀಜಿಗಳ ಆರ್ಶೀವಾದ ಪಡೆದರು. ಬಳಿಕ ಪಕ್ಷದ ಅಭ್ಯರ್ಥಿ ಆರ್.ಮಾದೇಶ್ ಮಾತನಾಡಿ, ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಮನೆ ಮನೆಗೆ ಭೇಟಿ ನೀಡಿ ಜನಾರ್ದನ ರೆಡ್ಡಿ ಅವರ ಪಕ್ಷವನ್ನು ಸಂಘಟನೆ ಮಾಡಲು ಮುಂದಾಗಿದ್ದೇವೆ. ಇಂದಿನಿಂದ ಪ್ರಚಾರವನ್ನು ನಡೆಸುತ್ತಿದ್ದೇವೆ. ಈ ಹಿಂದೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದೆ ಸಾಕಷ್ಟು ಕಾರ್ಯಕ್ರಮಗಳನ್ನು ಮಾಡಿದ್ದೆವು. ಆದರೆ, ಕಾರಣಾಂತರಗಳಿಂದ ಜೆಡಿಎಸ್ ಪಕ್ಷದಿಂದ ನಂಜನಗೂಡು ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಹಾಕುವುದಿಲ್ಲ ಎಂದು ಹೇಳಿದ್ದಾರೆ. ಸ್ನೇಹಿತರು ಹಾಗೂ ಮುಖಂಡರ ಒತ್ತಾಯದ ಮೇರೆಗೆ ನಾನು ಜನಾರ್ದನ ರೆಡ್ಡಿ ಅವರ ಪಕ್ಷಕ್ಕೆ ಸೇರ್ಪಡೆಯಾಗಿ ಸ್ಪರ್ಧಿಸುತ್ತಿದ್ದೇನೆ. ಆದ್ದರಿಂದ ಈ ಬಾರಿ ನನಗೊಂದು ಅವಕಾಶ ಕೊಡಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಸಂಘಟನೆ ಕಾರ್ಯದರ್ಶಿಯಾಗಿ . ಸಿದ್ದಪ್ಪ, ರೈತ ಸಂಘದ. ಜಿಲ್ಲಾ ಅಧ್ಯಕ್ಷ ರೇಣುಕಾ ಮೂರ್ತಿ, ಹಲ್ಲರೆ ಮಹೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.