ಮೈಸೂರು: ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಐದು ವರ್ಷಗಳ ಕಾಲ ಶಾಸಕರಾಗಿ, ಈಗ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಶಾಸಕ ಎಲ್.ನಾಗೇಂದ್ರ ಕೋಟ್ಯಧಿಪತಿಯಾಗಿದ್ದರೂ ಕೋಟಿಗಟ್ಟಲೇ ಸಾಲ ಮಾಡಿದ್ದಾರೆ.
ಚುನಾವಣಾ ಆಯೋಗಕ್ಕೆ ನೀಡಿರುವ ಆದಾಯದ ಪ್ರಮಾಣಪತ್ರದಲ್ಲಿ ತಮ್ಮ ಆಸ್ತಿ ವಿವರವನ್ನು ಅವರು ನೀಡಿದ್ದು ಅದರಲ್ಲಿ 8,45,87,159 ರೂ. ಮೌಲ್ಯದ ಆಸ್ತಿ ಘೋಷಣೆ ಮಾಡಿಕೊಂಡಿದ್ದಾರೆ. ಅದರಲ್ಲಿ ತಮಗೆ 2,39,10,000 ರೂ. ಸಾಲ ಇರುವುದಾಗಿಯೂ ಘೋಷಣೆ ಮಾಡಿದ್ದಾರೆ. ಒಟ್ಟಾರೆ ಆಸ್ತಿ ಪೈಕಿ 49,04,074 ರೂ. ಮೌಲ್ಯದ ಚರಾಸ್ತಿ ಹಾಗೂ 7,96,83,085 ರೂ. ಮೌಲ್ಯದ ಸ್ಥಿರಾಸ್ತಿ ಘೋಷಣೆ ಮಾಡಿಕೊಂಡಿದ್ದಾರೆ. ತಮ್ಮ ಪತ್ನಿ ಎಂ.ಶೀಲಾ ಹೆಸರಿನಲ್ಲಿ 1,64,39,518 ಮೌಲ್ಯದ ಆಸ್ತಿ ಘೋಷಣೆ ಮಾಡಿಕೊಂಡಿದ್ದಾರೆ. ಈ ಪೈಕಿ 32,39,518 ರೂ. ಮೌಲ್ಯದ ಚರಾಸ್ತಿ ಹಾಗೂ 1,32,00,000 ರೂ. ಮೌಲ್ಯದ ಸ್ಥಿರಾಸ್ತಿ ಘೋಷಣೆ ಮಾಡಿಕೊಂಡಿದ್ದಾರೆ. ಪತ್ನಿ ಹೆಸರಲ್ಲೂ 57,00,000 ರೂ. ಸಾಲ ಇರುವುದಾಗಿ ಘೋಷಿಸಿದ್ದಾರೆ.