ಮೈಸೂರು: ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ. ವರುಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಮಾಜಿ ಸಿಎಂ. ವರುಣ ಕ್ಷೇತ್ರದಲ್ಲಿ ಇಂದು ಮತ ಪ್ರಚಾರ ನಡೆಸಲಿರುವ ಸಿದ್ದು, ಸುತ್ತೂರು ಗ್ರಾಮಕ್ಕೆ ಹೆಲಿಕ್ಯಾಪ್ಟರ್ ಮೂಲಕ ಎಂಟ್ರಿ ಕೊಟ್ಟರು.
ಕಾರ್ಯ ಗ್ರಾಮದ ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯದಲ್ಲಿ ಚುನಾವಣಾ ಪ್ರಚಾರಕ್ಕೆ ಚಾಲನೆ. ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಾಥ್. ಸಿದ್ದರಾಮಯ್ಯ ಬರುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ವಿವಿಧ ಘೋಷಣೆಗಳನ್ನು ಕೂಗಿ ಅದ್ದೂರಿಯಾಗಿ ಸ್ವಾಗತ ಕೋರಿದರು.