News Kannada
Wednesday, February 28 2024
ಮೈಸೂರು

ಮೈಸೂರು: ಮನೆಮನೆ ಗೊಂಬೆ ಕೂರಿಸುವ ಸ್ಪರ್ಧೆ

Door-to-door doll sit-in competition in Mysore
Photo Credit : By Author

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕೆ ಎಂ ಪ್ರವೀಣ್ ಕುಮಾರ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಮನೆ ಮನೆಗಳಲ್ಲಿ ದಸರಾ ಗೊಂಬೆ ಕೂರಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಈ ಸಂಬಂಧ ಸ್ಪರ್ಧೆಯ ಪ್ರಚಾರ ಸಾಮಗ್ರಿಗಳನ್ನು ಶುಕ್ರವಾರ ಬಿಡುಗಡೆ ಮಾಡಲಾಯಿತು. ಈ ವೇಳೆ ಮಾತನಾಡಿದ ಶಾಸಕ ಎಲ್ ನಾಗೇಂದ್ರ ಅವರು, ಸಂಸ್ಕೃತಿಯ ಮತ್ತು ನಮ್ಮ ಪರಂಪರೆಯ ಉಳಿವಿಗಾಗಿ ಹೋರಾಡುವ ಸಂದರ್ಭ ಎದುರಾಗಿದೆ. ಪ್ರತಿಯೊಬ್ಬರೂ ಅದಕ್ಕಾಗಿ ಶ್ರಮಿಸಬೇಕು. ನಮ್ಮ ಸಂಪ್ರದಾಯ ಮತ್ತು ಧಾರ್ಮಿಕತೆಯನ್ನು ಪ್ರತಿಯೊಬ್ಬ ಹಿಂದೂಗಳು ಒಗ್ಗಟ್ಟಾಗಿ ಕಲೆತು ಮುಂದಿನ ಪೀಳಿಗೆಗೆ ಸಂರಕ್ಷಿಸಬೇಕು ಎಂದು ಹೇಳಿದರು.

ನವರಾತ್ರಿಯು ಮೈಸೂರು ಪರಂಪರೆಯಲ್ಲಿ ಅತ್ಯಂತ ಪವಿತ್ರವಾದದ್ದು ದಸರಾ ಗೊಂಬೆ ಪ್ರದರ್ಶನಕ್ಕೆ ಅತ್ಯಂತ ಮಹತ್ವವಿದೆ. ಪಟ್ಟದ ಗೊಂಬೆಗಳನ್ನು ಲಕ್ಷ್ಮಿನಾರಾಯಣ ಸ್ವರೂಪದಲ್ಲಿ ಪೂಜಿಸಿ ಪುರಾಣ ಪುಣ್ಯಕಥೆಗಳನ್ನು ಗೊಂಬೆಗಳ ಮೂಲಕ ರೂಪಕವಾಗಿ ಪ್ರಚುರಪಡಿಸಿ ಅದನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದೇ ಇದರ ಮೂಲ ಉದ್ದೇಶ. ಮೈಸೂರಿನ ಮನೆಮನೆಗಳಲ್ಲಿ ಕೂರಿಸುವುದರಿಂದ ಗೃಹಿಣಿಯರು ನಮ್ಮ ಪರಂಪರೆಯನ್ನು ಉಳಿಸಿ ಬೆಳೆಸುತ್ತಿದ್ದಾರೆ ಎಂದರು.

ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್ ಮಾತನಾಡಿ, ಸಂಸ್ಕೃತಿ ಇತಿಹಾಸ ಸಾರುವ ಹಾಗೂ ಐತಿಹಾಸಿಕ ಹಿನ್ನಲೆ ಒಳಗೊಂಡಂತೆ ಗೊಂಬೆಗಳನ್ನು ಕೂರಿಸಿದವರಿಗೆ ನಗದು ಬಹುಮಾನ ಮತ್ತು ಸ್ಪರ್ಧಾಳುಗಳಿಗೆ ಪ್ರಮಾಣ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಲಾಗುವುದು. ಅ.5ರೊ ಳಗೆ 9880752727ಈ ದೂರವಾಣಿ ಸಂಖ್ಯೆಗೆ ವಾಟ್ಸ್ ಆ್ಯಪ್ ಮೂಲಕ ಗೊಂಬೆ ಜೋಡಣೆ ಮಾಡಿರುವ ಚಿತ್ರ ಹಾಗೂ 3ನಿಮಿಷದ ವೀಡಿಯೊವನ್ನು ಕಳಿಸಿಕೊಡಬೇಕು ಎಂದು ಹೇಳಿದರು

ಈ ವೇಳೆ ಉಪಾಧ್ಯಕ್ಷರಾದ ಎಸ್ ಎನ್ ರಾಜೇಶ್, ಮೈಸೂರು ಮಹಾನಗರ ಪಾಲಿಕೆ ಉಪಾಯುಕ್ತರು ಅಭಿವೃದ್ಧಿ ಮಹೇಶ್, ಕಾರ್ಯಪಾಲಕ ಅಭಿಯಂತರುರಜಿತ್ ಕುಮಾರ್, ಅಭಿವೃದ್ಧಿ ಅಧಿಕಾರಿ ಮಂಜುನಾಥ ಇನ್ನಿತರರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು