News Kannada
Friday, March 01 2024
ಮೈಸೂರು

ಮೈಸೂರು: ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕನಿಗೆ ಚಾಕು ಇರಿತ

Mysuru: A youth was stabbed to death while he was celebrating his birthday
Photo Credit : News Kannada

ಮೈಸೂರು: ನಂಜನಗೂಡು ಪಟ್ಟಣದ ನೀಲಕಂಠನಗರ ಬಡಾವಣೆಯಲ್ಲಿ ಹುಟ್ಟುಹಬ್ಬ ಆಚರಣೆಯಲ್ಲಿ ನಿರತರಾಗಿದ್ದ ವೇಳೆ ಏಕಾಏಕಿ ಸ್ಥಳಕ್ಕಾಗಮಿಸಿದ ಯುವಕರ ಗುಂಪೊಂದು ಹುಟ್ಟುಹಬ್ಬ ಆಚರಣೆಗೆ ಆಕ್ಷೇಪ ವ್ಯಕ್ತಪಡಿಸಿ ಪ್ರಸಾದ್(24) ಎಂಬ ಯುವಕನಿಗೆ ಚಾಕುವಿನಿಂದ ಇರಿದಿರುವ ಘಟನೆ ನಂಜನಗೂಡು ಪಟ್ಟಣದ ನೀಲಕಂಠ ನಗರದಲ್ಲಿ ನಡೆದಿದೆ.

ಭಾನುವಾರ ರಾತ್ರಿ ನೀಲಕಂಠನಗರ ವೃತ್ತದಲ್ಲಿ ಸ್ಥಳೀಯರು ಗುಂಪುಗೂಡಿ ಹುಟ್ಟುಹಬ್ಬ ಆಚರಣೆ ಮಾಡುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಅನ್ಯ ಕೋಮಿನ ಕೆಲ ಯುವಕರು ಜಗಳಕ್ಕೆ ಮುಂದಾಗಿದ್ದಾರೆ ಎನ್ನಲಾಗಿದ್ದು, ಈ ವೇಳೆ ಪ್ರಸಾದ್ ಎಂಬ ಯುವಕನ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ತಕ್ಷಣ ಸ್ಥಳೀಯರು ಗಾಯಾಳುವನ್ನು ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಹಿಂದು ಪರ ಸಂಘಟನೆ ಕಾರ್ಯಕರ್ತರು ತಡರಾತ್ರಿ ನಂಜನಗೂಡು ಪಟ್ಟಣ ಪೊಲೀಸ್ ಠಾಣೆ ಮುಂದೆ ಜಮಾವಣೆಗೊಂಡು ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು