News Karnataka Kannada
Tuesday, April 23 2024
Cricket
ಮೈಸೂರು

ನಂಜನಗೂಡು ನಗರದ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ದರ್ಶನ್ ಧ್ರುವನಾರಾಯಣ್ ಭೇಟಿ

Nanjangud MLA Darshan Dhruvanarayan visits Public Hospital
Photo Credit : News Kannada

ನಂಜನಗೂಡು: ನಗರದ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ದರ್ಶನ್ ಧ್ರುವನಾರಾಯಣ್ ಭೇಟಿ ನೀಡಿದರು. ಶಾಸಕರಾದ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯವನ್ನು ವಿಚಾರಿಸಿದರು.

ಆಸ್ಪತ್ರೆಯಲ್ಲಿರುವ ಹಲವು ಸಮಸ್ಯೆಗಳ ಬಗ್ಗೆ ವಿಚಾರಿಸಿದ ಶಾಸಕರು, ಮುಂದಿನ ದಿನಗಳಲ್ಲಿ ಆಸ್ಪತ್ರೆಗೆ ಬೇಕಾದಂತಹ ಸೌಲಭ್ಯಗಳನ್ನು ನೀಡಲಾಗುತ್ತದೆ ಎಂದು ಭರವಸೆ ನೀಡಿದರು. ಆಸ್ಪತ್ರೆಯಲ್ಲಿ ವೈದ್ಯರು ರೋಗಿಗಳೊಂದಿಗೆ ಪ್ರೀತಿಯಿಂದ ವರ್ತಿಸಬೇಕು. ಅವರ ನೋವಿಗೆ ನೀವು ಸ್ಪಂದಿಸಿ ಉತ್ತಮವಾದ ಕೆಲಸವನ್ನು ಮಾಡಬೇಕು ಎಂದು ವೈದ್ಯರು ಮತ್ತು ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

ಎಲ್ಲಾ ಕೊಠಡಿಗಳಿಗೂ ಭೇಟಿ ನೀಡಿ ಆಸ್ಪತ್ರೆಯನ್ನು ಪರಿಶೀಲನೆ ನಡೆಸಿದ್ದಾರೆ ಕೆಲವು ಸಮಯ ವೈದ್ಯಧಿಕಾರಿಗಳ ಜೊತೆ ಚರ್ಚಿಸಿದ್ದಾರೆ.

ಈ ಸಂದರ್ಭದಲ್ಲಿ ತಾಲೂಕು ವೈದ್ಯಧಿಕಾರಿ ಡಾಕ್ಟರ್ ಈಶ್ವರ್, ಆಸ್ಪತ್ರೆಯ ಆಡಳಿತ ಅಧಿಕಾರಿ ಶಿವಪ್ರಸಾದ್ ಸೇರಿದಂತೆ ವೈದ್ಯರು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು