News Karnataka Kannada
Saturday, April 20 2024
Cricket
ಮೈಸೂರು

5 ವರ್ಷ ಕಾಲ ಸಿದ್ದರಾಮಯ್ಯ ಅವರೇ ಸಿಎಂ: ಎಂ.ಬಿ. ಪಾಟೀಲ್‌

Siddaramaiah will be CM for 5 years: M.B. Patil
Photo Credit : Twitter

ಮೈಸೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಸಚಿವ ಎಂ.ಬಿ. ಪಾಟೀಲ್‌ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ 5 ವರ್ಷ ಪೂರ್ಣಾವಧಿ ಸಿಎಂ ಆಗಲಿದ್ದಾರೆ ಎಂದು ಸೋಮವಾರ ಹೇಳಿಕೆ ನೀಡಿದ್ದಾರೆ. ಸುತ್ತೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಸಚಿವ ಎಂ ಬಿ ಪಾಟೀಲ್, ಲೋಕಸಭೆ ಚುನಾವಣೆ ಬಳಿಕ ಯಾವುದೇ ಬದಲಾವಣೆ ಇಲ್ಲ.ಸಿಎಂ ಬದಲಾವಣೆ ಬಗ್ಗೆ ಎಐಸಿಸಿ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಸಿದ್ದರಾಮಯ್ಯ ಮುಂದಿನ ಐದು ವರ್ಷವೂ ಸಿಎಂ ಆಗಲಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ ಎಂದರು.

ಬಿಜೆಪಿ ಅಧಿಕಾರ ಅವಧಿಯಲ್ಲಿ ನಡೆದಿರುವ ಎಲ್ಲಾ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ.ಪಿಎಸ್ ಐ ನೇಮಕಾತಿ ಹಗರಣ, ಆರೋಗ್ಯ ಇಲಾಖೆ, ನೀರಾವರಿ ಇಲಾಖೆ ಹಾಗೂ ಇತರೆ ಇಲಾಖೆಗಳಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸುತ್ತೇವೆ.ಎಲ್ಲಾ ಹಗರಣಗಳನ್ನು ಲಾಜಿಕ್ ಎಂಡ್ ಗೆ ತೆಗೆದುಕೊಂಡು ಹೋಗುತ್ತೇವೆ.ತಪ್ಪಿಸ್ಥ ರಿಗೆ ಶಿಕ್ಷೆ ಕೊಡಿಸುತ್ತೇವೆ, ನೊಂದ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುತ್ತೇವೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು