News Kannada
Saturday, September 23 2023
ಮೈಸೂರು

ಸಮಾಜದ ಉನ್ನತಿಯಲ್ಲಿ ಶಿಕ್ಷಣದ ಕೊಡುಗೆ ಅಪಾರ: ಥಾವರ್ ಚಂದ್ ಗೆಹ್ಲೋಟ್

mysr
Photo Credit : By Author

ಬೆಂಗಳೂರು: ವ್ಯಕ್ತಿಯ ನಿರ್ಮಾಣ ಮತ್ತು ಸಮಾಜದ ಉನ್ನತಿಯಲ್ಲಿ ಶಿಕ್ಷಣವು ಅತ್ಯಂತ ಮಹತ್ವದ ಕೊಡುಗೆಯನ್ನು ಹೊಂದಿದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.

ನಗರದಲ್ಲಿ ಸೆಂಟ್ ಜೋಸೆಫ್ ಕಾಲೇಜಿನ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಡೀ ಸಮಾಜ ಮತ್ತು ದೇಶದಲ್ಲಿ ನೈತಿಕತೆಯನ್ನು ಮೂಡಿಸುವ ಮತ್ತು ಆಧುನಿಕ ಜ್ಞಾನದ ಜೊತೆಗೆ ಸಂಸ್ಕೃತಿಯ ಸಂರಕ್ಷಣೆ, ರಾಷ್ಟ್ರದ ಏಕತೆ-ಸಮಗ್ರತೆ ಮತ್ತು ಸಮಾಜದಲ್ಲಿ ಸಮಾನತೆ ಮತ್ತು ಸೌಹಾರ್ದತೆಯನ್ನು ಕಾಪಾಡುವಂತಹ ಶಿಕ್ಷಣದ ಅವಶ್ಯಕತೆ ಇಂದು ಇದೆ ಎಂದರು.

ಸ್ವಾಮಿ ವಿವೇಕಾನಂದರ ಪ್ರಕಾರ, “ಶಿಕ್ಷಣದಿಂದ ವ್ಯಕ್ತಿತ್ವವು ರೂಪುಗೊಳ್ಳುತ್ತದೆ, ಮಾನಸಿಕ ಬೆಳವಣಿಗೆಯಾಗುತ್ತದೆ, ಬುದ್ಧಿವಂತಿಕೆಯು ಬೆಳೆಯುತ್ತದೆ ಮತ್ತು ಮನುಷ್ಯ ತನ್ನ ಸ್ವಂತ ಕಾಲಿನ ಮೇಲೆ ನಿಲ್ಲುತ್ತಾನೆ” ಎಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಶಿಕ್ಷಣವನ್ನು ಕೌಶಲ್ಯ ಮತ್ತು ನೈತಿಕ ಮೌಲ್ಯಗಳೊಂದಿಗೆ ಜೋಡಿಸುವ ಮೂಲಕ ಹೊಸ ಭಾರತ, ಶ್ರೇಷ್ಠ ಭಾರತವನ್ನು ನಿರ್ಮಿಸುವ ದೃಷ್ಟಿಯಲ್ಲಿ ಜೆಸ್ಯೂಟ್ ಸಂಸ್ಥೆಗಳು ಕೆಲಸ ಮಾಡುತ್ತಿವೆ ಎಂದು ತಿಳಿಸಿದರು.

ಸೆಂಟ್ ಜೋಸೆಫ್ ವಿದ್ಯಾಸಂಸ್ಥೆ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳುವುದರ ಜೊತೆಗೆ ಸುಸಜ್ಜಿತ ವಾತವರಣವನ್ನು ವಿದ್ಯಾಲಯದಲ್ಲಿ ಕಲ್ಪಿಸಿದೆ. ಈ ಸಂಸ್ಥೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಸಮಾನ ಅಧ್ಯಯನ ಅವಕಾಶಗಳು ಮತ್ತು ಶಿಸ್ತುಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿದು ಸಂತೋಷವಾಗಿದೆ. ಈ ಕಾಲೇಜಿನ ಉದ್ದೇಶವು ಪ್ರತಿಯೊಬ್ಬ ವಿದ್ಯಾರ್ಥಿಯ ಸರ್ವತೋಮುಖ ಅಭಿವೃದ್ಧಿಯತ್ತ ಗಮನಹರಿಸುವುದು ಮತ್ತು ಈ ಕಾಲೇಜು ಆಧುನಿಕತೆಯನ್ನು ಅಳವಡಿಸಿಕೊಂಡು, ಶಿಕ್ಷಣ ಕ್ಷೇತ್ರದ ಅತ್ಯಾಧುನಿಕ ಅವಶ್ಯಕತೆಗಳನ್ನು ಒದಗಿಸುತ್ತಿದೆ, ಇದರಿಂದ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ ಎಂದು ಹೇಳಿದರು.

ಭಾರತ ಸರ್ಕಾರ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದ್ದು, ಇದನ್ನು ಅಳವಡಿಸಿಕೊಂಡಿರುವ ಸೆಂಟ್ ಜೋಸೆಫ್ ವಿದ್ಯಾ ಸಂಸ್ಥೆ, ಉದ್ಯಮಶೀಲತೆ ಮತ್ತು ಜ್ಞಾನೋದಯಕ್ಕಾಗಿ ಎಲ್ಲರಿಗೂ ಒಳಗೊಳ್ಳುವ, ಗುಣಮಟ್ಟ, ಮಾನವೀಯ ಮತ್ತು ಉತ್ತಮ ಚಿಂತನೆ, ಮೌಲ್ಯಯುತ ಶಿಕ್ಷಣವನ್ನು ಒದಗಿಸಲು ಕೆಲಸ ಮಾಡುತ್ತದೆ ಎಂದು ಹೇಳಿದರು.

ಶಾಸಕರಾದ ಸ್ವರೂಪ್ ಪ್ರಕಾಶ್, ಹಾಸನ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ತಾರಾನಾಥ್, ಹಾಸನ ಜಿಲ್ಲಾಧಿಕಾರಿ ಐಎಎಸ್ ಶ್ರೀಮತಿ ಅರ್ಚನಾ, ಪೊಲೀಸ್ ವರಿಷ್ಠಾಧಿಕಾರಿ ಹರಿಹರನ್ ಶಂಕರ್, ಫಾರ್ ಡಿಯೋನಿಸಿಯಸ್ ವಾಜ್, ಹಸನ್ ಜೆಸ್ಯೂಟ್ ಎಜುಕೇಷÀನ್ ಸೊಸೈಟಿಯ ಅಧ್ಯಕ್ಷ, ಡೇನಿಯಲ್ ಫೆರ್ನಾಂಡಿಸ್, ಪ್ರಾಂಶುಪಾಲರು, ಹಾಸನ ಜೆಸ್ಯೂಟ್ ಎಜುಕೇಷನ್ ಸೊಸೈಟಿ ಮುಂತಾದ ಗಣ್ಯರು ಉಪಸ್ಥಿತರಿದ್ದರು.

 

See also  ಪಿರಿಯಾಪಟ್ಟಣ: ಅರಣ್ಯ ಸಿಬ್ಬಂದಿಗೆ ಸೌಲಭ್ಯ ಸಮರ್ಪಕವಾಗಿ ತಲುಪಬೇಕು- ಕೆ.ಮಹದೇವ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು