News Kannada
Friday, March 01 2024
ಮೈಸೂರು

ಯುವಕನಿಗೆ ಚಾಕು ಇರಿತ ಪ್ರಕರಣ: ಶಾಂತಿ ಸಭೆ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್

Young man stabbed to death; District Superintendent of Police Seema Latkar holds peace meeting
Photo Credit : News Kannada

ನಂಜನಗೂಡು: ನಗರದ ನೀಲಕಂಠ ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಇಂದು ನಂಜನಗೂಡು ನಗರದ ಪೊಲೀಸ್ ಭವನದಲ್ಲಿ ಶಾಂತಿ ಸಭೆ ನಡೆಸಿದರು.

ಮೈಸೂರು ಜಿಲ್ಲಾ ಪೊಲೀಸ್, ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯ ವತಿಯಿಂದ ಶಾಂತಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು.

ನೀಲಕಂಠ ನಗರದಲ್ಲಿ ಮೊನ್ನೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿತ್ತು. ಇದನ್ನು ಹಿಂದು ಮುಸ್ಲಿಂ ಗಲಾಟೆ ಎಂದು ಹಬ್ಬಿಸಿದರು. ಈ ವಿಚಾರವಾಗಿ ವಿವಿಧ ಸಂಘಟನೆಗಳ ಮುಖಂಡರು ಹಾಗೂ ನೀಲಕಂಠ ನಗರದ ಎರಡು ಕೋಮಿನ ಮುಖಂಡರೊಂದಿಗೆ ಸಭೆ ನಡೆಸಲಾಗಿದೆ. ವಾಸ್ತವದಲ್ಲಿ ಕ್ಷುಲಕ ಕಾರಣ ಮತ್ತು ವೈಯಕ್ತಿಕ ವಿಚಾರಕ್ಕೆ ಗಲಾಟೆಗಳು ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾಂತಿ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಮಾತನಾಡಿ, ಸಮಾಜದಲ್ಲಿ ಶಾಂತಿಯನ್ನು ಕಾಪಾಡಲು ಎಲ್ಲರೂ ಸಹಕರಿಸಬೇಕು.

ಪೊಲೀಸ್ ಠಾಣೆಗಳಲ್ಲಿ ಪೊಲೀಸರ ಕೊರತೆ ಇದೆ. ಹೆಚ್ಚು ಪೊಲೀಸ್ ಸಿಬ್ಬಂದಿ ಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ.
ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಯುವಕರು ಭಾಗಿಯಾಗಬೇಡಿ. ಸಾಮಾಜಿಕ ಜಾಲತಾಣದಲ್ಲಿ ಅಶಾಂತಿ ಉಂಟುಮಾಡುವ ಯಾವುದೇ ಪೋಸ್ಟ್ ಹಾಕಿದರೆ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು.

ನಂಜನಗೂಡು ಕ್ಷೇತ್ರವನ್ವು ತನ್ನದೆ ಆದ ಇತಿಹಾಸವನ್ನು ಹೊಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಡಿವೈಎಸ್ಪಿ ಗೋವಿಂದರಾಜು, ತಹಶೀಲ್ದಾರ್ ಶಿವಕುಮಾರ್, ಪಿಎಸ್ಐ ಬಸವರಾಜು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ನೀಲಕಂಠ ನಗರದ ನಿವಾಸಿಗಳು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು