ಮೈಸೂರು: ಜಿಲ್ಲಾಡಳಿತದ ವತಿಯಿಂದ ನಗರದ ಹುಣಸೂರು ರಸ್ತೆಯಲ್ಲಿರುವ ಕಲಾಮಂದಿರದಲ್ಲಿ ಟಿಪ್ಪು ಜಯಂತಿಯನ್ನು ಬಿಗಿಪೊಲೀಸ್ ಬಂದೋಬಸ್ತ್ನಲ್ಲಿ ಆಚರಿಸಲಾಗುತ್ತಿದೆ.
ಬೆಳಿಗ್ಗೆ ಕೋಟೆ ಆಂಜನೇಯ ದೇವಾಲಯ ಬಳಿಯಿಂದ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತಾದರೂ ಅದನ್ನು ತಡೆಹಿಡಿಯಲಾಗಿದೆ. ಅತ್ತ ಕಲಾ ಮಂದಿರದಲ್ಲಿ ಟಿಪ್ಪು ಭಾವಚಿತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದ್ದಾರೆ.
ಇತ್ತ ನ್ಯಾಯಾಲಯದ ಎದುರು ಇರುವ ಗಾಂಧಿ ಪ್ರತಿಮೆ ಮುಂದೆ ಬಿಜೆಪಿ ಸೇರಿದಂತೆ ಹಿಂದುಪರ ಸಂಘಟನೆಗಳು ಟಿಪ್ಪು ಜಯಂತಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿವೆ.
ಈ ಸಂದರ್ಭ ಮಾತನಾಡಿದ ವಿಧಾನಪರಿಷತ್ ಸದಸ್ಯ ಗೋ.ಮಧುಸೂದನ್ ಕೆಂಪೇಗೌಡರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಗಿರೀಶ್ ಕಾನರ್ಾಡ್ ವಿರುದ್ಧ ವಾಗ್ದಾಳಿ ನಡೆಸಿದರಲ್ಲದೆ ಹಿಂದೂಗಳನ್ನು ಅಪಮಾನ ಮಾಡುತ್ತಿರುವ ಅವನೊಬ್ಬ ನಪುಂಸಕ ಎಂದು ಆಕ್ರೋಶಭರಿತರಾಗಿ ಮಾತನಾಡಿದ ಅವರು, ಕಾನರ್ಾಡ್ ಸಕರ್ಾರಕ್ಕೆ ನಾಲಿಗೆಯನ್ನು ಬಾಡಿಗೆಗೆ ನೀಡಿದ್ದಾರೆ. ಅವರಂತಹವರನ್ನು ಗಡೀಪಾರು ಮಾಡಬೇಕು ಎಂದು ಆಗ್ರಹಿಸಿದರು.
ಮೂರ್ಖತನದ ಪರಮಾವಧಿಯ ಹೇಳಿಕೆ ನೀಡುತ್ತಿರುವ ಕಾನರ್ಾಡ್ ದೀಪಾವಳಿ ಸಂದರ್ಭ ಸಮಸ್ತ ಹಿಂದೂಗಳಿಗೆ ಅಪಮಾನ ಮಾಡಿದ್ದಾರೆ ಎಂದು ಗುಡುಗಿದರು.