ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿ ಸ್ಥಾನ ಅಭಾದಿತ

ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿ ಸ್ಥಾನ ಅಭಾದಿತ

CI   ¦    Oct 16, 2020 04:38:36 PM (IST)
ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿ ಸ್ಥಾನ ಅಭಾದಿತ

ಮೈಸೂರು: ಮೈಸೂರು ಜಿಲ್ಲಾಧಿಕಾರಿಯಾಗಿ ಇರಬೇಕೆಂಬ ರೋಹಿಣಿ ಸಿಂಧೂರಿ ಅವರಿಗೆ ಮತ್ತೊಮ್ಮೆ ರಿಲೀಫ್ ಸಿಕ್ಕಿದೆ. ಈ ಮೂಲಕ ಇನ್ನಷ್ಟು ದಿನಗಳ ಕಾಲ ರೋಹಿಣಿ ಸಿಂಧೂರಿ ಅವರಿಗೆ ಮೈಸೂರು ಡಿಸಿ ಸ್ಥಾನ ಅಭಾದಿತವಾಗಿದೆ.

ಅವಧಿಗೂ ಮುನ್ನ ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ನಿರ್ಗಮಿತ ಡಿಸಿ ಶರತ್ ಅವರು ಸಿಎಟಿ ಮೊರೆ ಹೋಗಿದ್ದರರು. ಈ ಸಂಬಂಧ ಇಂದು ಆನ್ ಲೈನ್ ನಲ್ಲಿಯೇ ವಾದ ಪ್ರತಿವಾದವನನು ಸಿಎಟಿ ಆಲಿಸಿತು.

ಶರತ್ ಅವರನ್ನು ನಿಯಮಬಾಹಿರವಾಗಿ ವರ್ಗಾವಣೆ ಮಾಡಲಾಗಿದೆ. ಎರಡು ವರ್ಷಗಳ ಕಾಲ ಕಡ್ಡಾಯ ಸೇವೆಯಲ್ಲಿ ಇರಬೇಕೆಂಬ ಸರ್ಕಾರದ ನಿಯಮವನ್ನು ಸರ್ಕಾರವೇ ಗಾಳಿಗೆ ತೂರಿದೆ ಎಂದು ಶರತ್ ಪರ ವಕೀಲ ಎ.ಎಸ್.ಪೊನ್ನಣ್ಣ ವಾದ ಮಂಡಿಸಿದ್ದರು.

ಪ್ರತಿವಾದ ಮಂಡಿಸಲು ಎಜಿ ಕಾಲಾವಕಾಶ ಕೇಳಿದ ಕಾರಣ ಸಿಎಟಿ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 23ಕ್ಕೆ ಮುಂದೂಡಿತು.