ಜೆಡಿಎಸ್ ನಾಯಕ ಜಿಟಿ ದೇವೇಗೌಡಗೆ ಕೊರೋನಾ ಪಾಸಿಟಿವ್

ಜೆಡಿಎಸ್ ನಾಯಕ ಜಿಟಿ ದೇವೇಗೌಡಗೆ ಕೊರೋನಾ ಪಾಸಿಟಿವ್

HSA   ¦    Aug 05, 2020 12:13:53 PM (IST)
ಜೆಡಿಎಸ್ ನಾಯಕ ಜಿಟಿ ದೇವೇಗೌಡಗೆ ಕೊರೋನಾ ಪಾಸಿಟಿವ್

ಮೈಸೂರು: ಜೆಡಿಎಸ್ ನ ಹಿರಿಯ ನಾಯಕ, ಮಾಜಿ ಸಚಿವ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ ಅವರಿಗೆ ಕೊರೋನಾ ಪಾಸಿಟಿವ್ ಆಗಿದೆ.

ಬೆಂಗಳೂರಿನಲ್ಲಿ ಇರುವ ಖಾಸಗಿ ಆಸ್ಪತ್ರೆಗೆ ಅವರು ಕೆಲವು ಲಕ್ಷಣಗಳೊಂದಿಗೆ ದಾಖಲಾಗಿದ್ದಾರೆ.

ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಸಾಮಾಜಿಕ ಅಂತರವನ್ನು ಕಡೆಗಣಿಸಿ ಅವರು ಭಾಗವಹಿಸಿದ್ದರು ಎಂದು ಹೇಳಲಾಗಿದೆ.

ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮಿಶ್ರ ಸರ್ಕಾರದಲ್ಲಿ ಅವರು ಮೈಸೂರು ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದರು. 2018ರಲ್ಲಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪರಾಭವಗೊಳಿಸಿದ್ದರು.