ಮೈಸೂರು ದಸರಾ: ಜಂಬೂಸವಾರಿಗೆ ಕ್ಷಣಗಣನೆ

ಮೈಸೂರು ದಸರಾ: ಜಂಬೂಸವಾರಿಗೆ ಕ್ಷಣಗಣನೆ

LK   ¦    Oct 08, 2019 09:45:25 AM (IST)
ಮೈಸೂರು ದಸರಾ: ಜಂಬೂಸವಾರಿಗೆ ಕ್ಷಣಗಣನೆ

ಮೈಸೂರು: ಸೋಮವಾರ ನಾಡಿನೆಲ್ಲೆಡೆ ಆಯುಧಪೂಜೆ ಸಡಗರ ಸಂಭ್ರಮದಿಂಧ ನಡೆದಿದ್ದು ಇಂದು ವಿಜಯದಶಮಿ ನಡೆಯಲಿದೆ. ಮೈಸೂರಿನಲ್ಲಿ ಸಡಗರ ಮುಗಿಲುಮುಟ್ಟಿದ್ದು, ಜಂಬೂಸವಾರಿಯನ್ನು ಕಣ್ತುಂಬಿಕೊಳ್ಳಲು ಜನರು ಕಾತರದಿಂದ ಕಾಯುತ್ತಿದ್ದಾರೆ.

ಇಂದು ಮಧ್ಯಾಹ್ನ ೨.೧೫ರಿಂದ ವಿಜಯದಶಮಿ ಮೆರವಣಿಗೆ ಆರಂಭವಾಗಲಿದ್ದು, ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಸಂಜೆ ೪.೩೧ರಿಂದ ೪.೫೭ರ ಒಳಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಪುಷ್ಪಾರ್ಚನೆ ಮಾಡಲಿದ್ದಾರೆ.