ಮೈಸೂರಲ್ಲಿ ವರಮಹಾಲಕ್ಷ್ಮಿ ಹಬ್ಬದ ಖರೀದಿ  ಜೋರು 

ಮೈಸೂರಲ್ಲಿ ವರಮಹಾಲಕ್ಷ್ಮಿ ಹಬ್ಬದ ಖರೀದಿ  ಜೋರು 

CI   ¦    Jul 29, 2020 02:39:17 PM (IST)
ಮೈಸೂರಲ್ಲಿ ವರಮಹಾಲಕ್ಷ್ಮಿ ಹಬ್ಬದ ಖರೀದಿ  ಜೋರು 

ಮೈಸೂರು: ಕೋವಿಡ್‌ 19 ಸೋಂಕಿನ ಭೀತಿಯ ನಡುವೆಯೂ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ನಗರದ ಜೆ.ಕೆ.ಮೈದಾನದಲ್ಲಿ ಹೂವಿನ ಖರೀದಿ ಪ್ರಾರಂಭವಾಗಿದೆ.

ಎಂದಿನಂತೆ ಹಬ್ಬದ ಹಿನ್ನೆಲೆಯಲ್ಲಿ ಹೂವಿನ ಬೆಲೆ ಏರಿಕೆಯಾಗಿದೆ. ಆದರೂ ಸಾರ್ವಜನಿಕರು ಹಬ್ಬದ ಆಚರಣೆಗಾಗಿ ಹೂಗಳನ್ನು ಖರೀದಿಸುತ್ತಿದ್ದಾರೆ. ಇಂದಿನಿಂದ ಜೆ.ಕೆ.ಮೈದಾನದಲ್ಲಿ ಹೂವಿನ ವ್ಯಾಪಾರ ಪ್ರಾರಂಭವಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಖರೀದಿದಾರರು ಬಂದಿರಲಿಲ್ಲ. ಆದರೆ ಸಂಜೆ ವೇಳೆಗೆ ವ್ಯಾಪಾರ ಜೋರಾಗುವ ಸಾಧ್ಯತೆ ಹೆಚ್ಚಿದೆ.

ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ದೇವರಾಜ ಮಾರುಕಟ್ಟೆಯಲ್ಲಿ ಖರೀದಿಗಾಗಿ ಉಂಟಾಗುವ ಜನದಟ್ಟಣೆ ತಪ್ಪಿಸುವ ಸಲುವಾಗಿ ಮೂರು ದಿನಗಳ ಮಾರುಕಟ್ಟೆಯಲ್ಲಿನ ಹೂವಿನ ವ್ಯಾಪಾರದ ಸಗಟು ಮತ್ತು ಚಿಲ್ಲರೆ ಮಾರಾಟ ಮಳಿಗೆಗಳನ್ನು ಮುಚ್ಚಲು ಆದೇಶಿಸಿದ್ದ ನಗರಪಾಲಿಕೆ ಬದಲಿ ವ್ಯವಸ್ಥೆಯಾಗಿ ಜೆಕೆ ಮೈದಾನದಲ್ಲಿ ಹೂ ಮಾರಾಟಕ್ಕೆ ಅವಕಾಶ ಕಲ್ಪಿಸಿತ್ತು. ಅದರಂತೆ ಇಂದಿನಿಂದ ಜೆ.ಕೆ.ಮೈದಾನದಲ್ಲಿ ಹೂವಿನ ವ್ಯಾಪಾರ ಪ್ರಾರಂಭವಾಗಿದೆ.

ನಗರದಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ನಗರದ ಹೆಚ್ಚಿನ ಸಾರ್ವಜನಿಕರು ಹೂ ವ್ಯಾಪರಕ್ಕಾಗಿ ದೇವರಾಜ ಮಾರುಕಟ್ಟೆಗೆ ಹೋಗುತ್ತಾರೆ. ಇದರಿಂದ ಮಾರುಕಟ್ಟೆಯಲ್ಲಿ ಜನದಟ್ಟಣೆ ಹೆಚ್ಚಾಗುವ ಸಂಭವವಿದ್ದು, ಕೋವಿಡ್ 19 ಸೋಂಕು ತಡೆಗಟ್ಟುವ ಮುಂಜಾಗೃತ ಕ್ರಮವಾಗಿ ಇಂದಿನಿಂದ ಜು.31 ರವರೆಗೆ ಮೂರು ದಿನಗಳ ಕಾಲ ದೇವರಾಜ ಮಾರುಕಟ್ಟೆ ಹೂವಿನ ವ್ಯಾಪಾರದ ಸಗಟು ಮತ್ತು ಚಿಲ್ಲರೆ ಮಾರಾಟ ಮಳಿಗೆಗಳನ್ನು ಮುಚ್ಚಲು ಆದೇಶಿಸಿ ನಗರಪಾಲಿಕೆ ಆಯುಕ್ತರು ಪ್ರಕಟಣೆ ಹೊರಡಿಸಿದ್ದರು