ಚಾಮರಾಜನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಎಂಬಿಬಿಎಸ್ ಆರಂಭ

ಚಾಮರಾಜನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಎಂಬಿಬಿಎಸ್ ಆರಂಭ

MS   ¦    Feb 13, 2021 09:10:38 AM (IST)
ಚಾಮರಾಜನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಎಂಬಿಬಿಎಸ್ ಆರಂಭ

ಚಾಮರಾಜನಗರ: ಬಿಎಸ್‌ಸಿ ನರ್ಸಿಂಗ್ ಕೋರ್ಸ್ ಅನ್ನು 2020-21ನೇ ಸಾಲಿನಿಂದಲೇ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್‌ಸ್) ಯಲ್ಲಿ ಪ್ರಾರಂಭಿಸಲಾಗುತ್ತದೆ ಎಂದು ಪ್ರಾಥಮಿಕ, ಪ್ರೌಢಶಿಕ್ಷಣ, ಸಕಾಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಕೋರ್ಸ್‌ಗೆ 100 ಸೀಟುಗಳ ಪ್ರವೇಶವಿದ್ದು, ಎಲ್ಲ ಸೀಟುಗಳನ್ನು ಸರ್ಕಾರಿ ಕೋಟಾದ ಮೂಲಕವೇ ಭರ್ತಿ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿಯವರು ಮಾಹಿತಿ ಹಂಚಿಕೊಂಡಿದ್ದಾರೆ.

ಗಡಿ ಜಿಲ್ಲೆಯ ಶೈಕ್ಷಣಿಕ ಹಾಗೂ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಜಿಲ್ಲೆಗೆ ಬಿಎಸ್‌ಸಿ ನರ್ಸಿಂಗ್ ಕೋರ್ಸ್ ಅನ್ನು ಈ ಸಾಲಿನಿಂದಲೇ ಪ್ರಾರಂಭ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರಿಗೆ ಮನವಿ ಮಾಡಿದ್ದರು. ಇದೀಗ ಉಸ್ತುವಾರಿ ಸಚಿವರ ಮನವಿಗೆ ಸ್ಪಂದಿಸಿ ವೈದ್ಯಕೀಯ ಶಿಕ್ಷಣ ಇಲಾಖೆ ನಸಿರ್ಂಗ್ ಕಾಲೇಜು ಆರಂಭಕ್ಕೆ ಆದೇಶ ಹೊರಡಿಸಿದೆ.