ಮೈಸೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

ಮೈಸೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

YK   ¦    Jan 12, 2020 11:11:00 AM (IST)
ಮೈಸೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

ಮೈಸೂರು: ಇಲ್ಲಿನ ವಿದ್ಯಾರಣ್ಯಾಪುರಂ ಬಳಿಯ ಸೂಯೆಜ್ ಫಾರಂನ ಕೊಳಚೆ ನೀರು ಶುದ್ಧೀಕರಣ ಘಟಕದಲ್ಲಿ ಶನಿವಾರ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷವಾಗಿದೆ.

ಘಟಕದ ಸಿಬ್ಬಂದಿ ಇದನ್ನು ನೋಡಿ ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಮೊಸಳೆ ಹಿಡಿಯಲು ಪ್ರಯತ್ನಿಸಿದರು. ಆದರೆ, ಅದು ಸಿಗದೇ ಕೊಳಚೆ ನೀರಿನ ಹೊಂಡದೊಳಗೆ ಹೋಯಿತು. ಕತ್ತಲಾದ್ದರಿಂದ ಕಾರ್ಯಾಚರಣೆಗೆ ಅಡ್ಡಿಯಾಯಿತು.

ಇಂದು ಮೊಸಳೆ ಸೆರೆ ಕಾರ್ಯಾಚರಣೆ ನಡೆಯಲಿದೆ ಎಂದು ವಲಯ ಅರಣ್ಯ ಸಂರಕ್ಷಣಾಧಿಕಾರಿ ದೇವರಾಜು ತಿಳಿಸಿದ್ದಾರೆ.