ಮೈಸೂರು ಭಾಗಕ್ಕೆ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ: ಸುರೇಶ್ ಕುಮಾರ್

ಮೈಸೂರು ಭಾಗಕ್ಕೆ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ: ಸುರೇಶ್ ಕುಮಾರ್

HSA   ¦    Feb 10, 2020 02:21:54 PM (IST)
ಮೈಸೂರು ಭಾಗಕ್ಕೆ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ: ಸುರೇಶ್ ಕುಮಾರ್

ಮೈಸೂರು: ರಾಜ್ಯ ಸಚಿವ ಸಂಪುಟಕ್ಕೆ ನೂತನವಾಗಿ ಹತ್ತು ಮಂದಿ ಸಚಿವರನ್ನು ಸೇರ್ಪಡೆ ಮಾಡಲಾಗಿದೆ. ಮುಂದಿನ ಸಲ ಮೈಸೂರು ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭರವಸೆ ನೀಡಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ವಿಭಾಗಕ್ಕೆ ಭವಿಷ್ಯದಲ್ಲಿ ಸಚಿವ ಸ್ಥಾನ ನೀಡಲಾಗುತ್ತದೆ ಎಂದರು.

ಶಾಲೆಯಲ್ಲಿನ ಮಕ್ಕಳಿಗೆ ಶಿಕ್ಷೆ ನೀಡುತ್ತಿರುವ ವಿಚಾರವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಇನ್ನು ಮುಂದೆ ಶಾಲೆಗಳಲ್ಲಿ ಮೊಬೈಲ್ ಬಳಸದಂತೆ ಸೂಚಿಸಲಾಗಿದೆ ಎಂದು ಹೇಳಿದರು.