ಮೈಸೂರು ಅರಮನೆ ಸುತ್ತಮುತ್ತಲ ರಸ್ತೆಗಳಲ್ಲಿ ಏಕ ಮುಖ ಸಂಚಾರ

ಮೈಸೂರು ಅರಮನೆ ಸುತ್ತಮುತ್ತಲ ರಸ್ತೆಗಳಲ್ಲಿ ಏಕ ಮುಖ ಸಂಚಾರ

LK   ¦    Oct 16, 2020 06:35:34 PM (IST)
ಮೈಸೂರು ಅರಮನೆ ಸುತ್ತಮುತ್ತಲ ರಸ್ತೆಗಳಲ್ಲಿ ಏಕ ಮುಖ ಸಂಚಾರ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಅ.17ರಿಂದ 26ರವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ಮೈಸೂರಿಗೆ ಹೆಚ್ಚು ಬರುವ ಸಾಧ್ಯತೆ ಇದ್ದು, ಸಂಚಾರ ದಟ್ಟಣೆ ಉಂಟಾಗುವುದರಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ.

17 ರಿಂದ 26ರವರೆಗೆ ಪ್ರತಿ ದಿನ ಮಧ್ಯಾಹ್ನ 4 ಗಂಟೆಯಿಂದ ರಾತ್ರಿ 9.30ರವರೆಗೆ ಏಕಮುಖ ಸಂಚಾರ ವ್ಯವಸ್ಥೆ ಮಾಡಿ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ. ಅರಮನೆಯ ಸುತ್ತಲಿನ ರಸ್ತೆಗಳಾದ ಶಿವರಾತ್ರಿ ರಾಜೇಂದ್ರ ವೃತ್ತ, ಕುಸ್ತಿ ಅಖಾಡ ಜಂಕ್ಷನ್, ಬಿ.ಎನ್.ರಸ್ತೆ, ಜಯಚಾಮರಾಜ ಒಡೆಯರ್ ವೃತ್ತ, ಆಲ್ಬರ್ಟ್ ವಿಕ್ಟರ್ ರಸ್ತೆ, ಚಾಮರಾಜ ಒಡೆಯರ್ ವೃತ್ತ, ಆಲ್ಬರ್ಟ್ ವಿಕ್ಟರ್ ರಸ್ತೆ, ನಾಲ್ವಡಿ ಕೃಷರಾಜ ಒಡೆಯರ್ ವೃತ್ತ, ನ್ಯೂ ಸಯ್ಯಾಜಿರಾವ್ ರಸ್ತೆ, ಬಸವೇಶ್ವರ ವೃತ್ತ, ಚಾಮರಾಜ ಜೋಡಿ ರಸ್ತೆ, ಶ್ರೀ ಶಿವರಾತ್ರಿ ರಾಜೇಂದ್ರ ವೃತ್ತ ಈ ರಸ್ತೆಗಳಲ್ಲಿ ಅರಮನೆಯನ್ನು ಮದ್ಯಬಿಂದುವನ್ನಾಗಿ ಪರಿಗಣಿಸಿ ಗಡಿಯಾರದ ಮುಳ್ಳು ಸುತ್ತುವ ದಿಕ್ಕಿಗೆ ವಿರುದ್ದ ದಿಕ್ಕಿನಲ್ಲಿ ಮಾತ್ರ ವಾಹನಗಳು ಸಂಚರಿಸಲು ಅವಕಾಶ ನೀಡಲಾಗಿದೆ. ಈ ರಸ್ತೆಗಳಲ್ಲಿ  ಗಡಿಯಾರದ ಮುಳ್ಳು ಸುತ್ತುವ ದಿಕ್ಕಿನಲ್ಲಿ ಮಾತ್ರ (ಕ್ಲಾಕ್ ವೈಸ್) ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ನಾಲ್ವಡಿ ಕೃಷರಾಜ ಒಡೆಯರ್ ವೃತ್ತದಿಂದ ಸಯ್ಯಾಜಿರಾವ್ ರಸ್ತೆಯಲ್ಲಿ ಬರುವಂತಹ ವಾಹನಗಳು ಬಾಟಾ ಜಂಕ್ಷನ್, ವಿಶ್ವೇಶ್ವರಯ್ಯ ವೃತ್ತ, ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿ ಮುಂದುವರೆದು ಎಲ್ಲಮ್ಮಾಂಬ ದೇವಸ್ಥಾನ ಜಂಕ್ಷನ್ ಬಳಿ ಬಲತಿರುವು ಪಡೆದು ಕಬೀರ್ ರಸ್ತೆಯಲ್ಲಿ ಶ್ರೀ ಟಾಕೀಸ್ ಜಂಕ್ಷನ್, ಮಂಡಿ ಪೆÇಲೀಸ್ ಠಾಣಾ ಜಂಕ್ಷನ್, ಅಶೋಕ ರಸ್ತೆ,  ಮಹಾವೀರ ವೃತ್ತ, ಚಾಮರಾಜ ಒಡೆಯರ್ ವೃತ್ತ ಈ ರಸ್ತೆಗಳ ಮಧ ಇರುವ ಪ್ರದೇಶವನ್ನು ಮಧ ಬಿಂದುವನ್ನಾಗಿ ಪರಿಗಣಿಸಿ ಗಡಿಯಾರದ ಮುಳ್ಳು ಸುತ್ತುವ ದಿಕ್ಕಿಗೆ ಮಾತ್ರ (ಕ್ಲಾಕ್ ವೈಸ್) ವಾಹನಗಳು ಸಂಚರಿಸಲು ಅವಕಾಶ ನೀಡಲಾಗಿದೆ.

ಕಬೀರ್ ರಸ್ತೆಯಲ್ಲಿ ಅಶೋಕ ರಸ್ತೆ ಕಡೆಯಿಂದ ನ್ಯೂ ಸಯ್ಯಾಜಿರಾವ್ ರಸ್ತೆ ಕಡೆಗೆ ಬರುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಅಶೋಕ ರಸ್ತೆಯಿಂದ ನ್ಯೂ ಸಯ್ಯಾಜಿರಾವ್ ರಸ್ತೆ ಕಡೆಗೆ ಬರುವಂತಹ ವಾಹನಗಳು ಅಕ್ಬರ್ ರಸ್ತೆ ಮಾರ್ಗವಾಗಿ, ರಾಗಿ ಮಂಡಿ ಜಂಕ್ಷನ್, ಮಂಡಿ ಮಾರುಕಟ್ಟೆ ಜಂಕ್ಷನ್ ವರೆಗೆ ಸಂಚರಿಸಲು ಅವಕಾಶ ನೀಡಲಾಗಿದೆ. ಮಂಡಿ ಮಾರುಕಟ್ಟೆ ಜಂಕ್ಷನ್ ನಿಂದ ಅಕ್ಬರ್ ರಸ್ತೆ ಮಾರ್ಗವಾಗಿ ಅಶೋಕ ರಸ್ತೆ ಕಡೆಗೆ ಬರುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು  ನಿರ್ಬಂಧಿಸಲಾಗಿದೆ.

ನೆಹರು ವೃತ್ತದಿಂದ ಬಿ.ಎನ್. ರಸ್ತೆ ಜಂಕ್ಷನ್ ವರೆಗೆ : ಪಶ್ಚಿಮದಿಂದ ಪೂರ್ವಕ್ಕೆ ಏಕಮುಖ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಪೂರ್ವದಿಂದ ಪಶ್ಚಿಮಕ್ಕೆ ಎಲ್ಲಾ ಮಾದರಿಯ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಬನುಮಯ್ಯ ರಸ್ತೆಯಲ್ಲಿ  ಚಾಮರಾಜ ಜೋಡಿ ರಸ್ತೆ ಜಂಕ್ಷನ್‍ನಿಂದ ಬನುಮಯ್ಯ ಚೌಕದ ವರೆಗೆ : ದಕ್ಷಿಣದಿಂದ ಉತ್ತರಕ್ಕೆ ವಾಹನಗಳ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಟ್ಟಿರುತ್ತದೆ. ಉತ್ತರದಿಂದ ದಕ್ಷಿಣಕ್ಕೆ ವಾಹನಗಳ ಸಂಚಾರವನ್ನು  ನಿರ್ಬಂಧಿಸಲಾಗಿದೆ.

ತ್ಯಾಗರಾಜ ರಸ್ತೆಯಲ್ಲಿ ಎನ್. ಮಾಧುರಾವ್ ವೃತ್ತದಿಂದ ಚಾಮರಾಜ ಜೋಡಿ ರಸ್ತೆ ಜಂಕ್ಷನ್‍ವರೆಗೆ : ದಕ್ಷಿಣದಿಂದ ಉತ್ತರಕ್ಕೆ ವಾಹನಗಳ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಟ್ಟಿರುತ್ತದೆ. ಈ ಭಾಗದಲ್ಲಿ ಉತ್ತರದಿಂದ ದಕ್ಷಿಣಕ್ಕೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ವಾಹನಗಳ ನಿಲುಗಡೆ ನಿಷೇಧ: ಅ.17ರಿಂದ 26ರವರೆಗೆ ಪ್ರತಿ ದಿನ ಮಧ್ಯಾಹ್ನ 4ಗಂಟೆಯಿಂದ ರಾತ್ರಿ 9.30ರವರೆಗೆ ಅಂಬಾವಿಲಾಸ ಅರಮನೆ ಸುತ್ತ ಮುತ್ತಲೂ ಯಾವುದೇ ವಾಹನಗಳ ನಿಲುಗಡೆಗೆ ಅವಕಾಶವಿರುವುದಿಲ್ಲ. (ಟೌನ್‍ಹಾಲ್, ದೊಡ್ಡಕೆರೆ ಮೈದಾನ, ವರಹಾದ್ವಾರ ಹಾಗೂ ಅರಮನೆ ಸುತ್ತಲೂ ಇತರೇ ಸ್ಥಳಗಳಲ್ಲಿ). ಸಯ್ಯಾಜಿರಾವ್ ರಸ್ತೆಯಲ್ಲಿ  ನಾಲ್ವಡಿ ಕೃಷರಾಜ ಒಡೆಯರ್ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ,ಪುರಂದರ ರಸ್ತೆಯಲ್ಲಿ ಬಿ. ರಾಚಯ್ಯ ವೃತ್ತದಿಂದ ಬಿ.ಎನ್ ರಸ್ತೆ ಜಂಕ್ಷನ್‍ವರೆಗೆ, ಬಿ.ಎನ್ ರಸ್ತೆಯಲ್ಲಿ  ಶಿವರಾತ್ರಿ ರಾಜೇಂದ್ರ ವೃತ್ತದಿಂದ ಜಯಚಾಮರಾಜೇಂದ್ರ ವೃತ್ತದವರೆಗೆ, ಆಲ್ಬರ್ಟ್ ವಿಕ್ಟರ್ ರಸ್ತೆಯಲ್ಲಿ ಜಯಚಾಮರಾಜೇಂದ್ರ ವೃತ್ತದಿಂದ ನಾಲ್ವಡಿ ಕೃಷರಾಜ ಒಡೆಯರ್ ವೃತ್ತದವರೆಗೆ, ಅಶೋಕ ರಸ್ತೆಯಲ್ಲಿ ನೆಹರು ವೃತ್ತದಿಂದ ಮಹಾವೀರ ವೃತ್ತದವರೆಗೆ,     ಅಶೋಕ ರಸ್ತೆಯಲ್ಲಿ ಮಹಾವೀರ ವೃತ್ತದಿಂದ ಜಯಚಾಮರಾಜ ವೃತ್ತದವರೆಗೆ ಹಾಗೂ ಅರಮನೆಯ ಬಲರಾಮ ದ್ವಾರದ ಮುಂಭಾಗ ಇರುವ ಖಾಲಿ ಸ್ಥಳ ಸೇರಿದಂತೆ, ಡಾ.ರಾಜ್‍ಕುಮಾರ್ ವೃತ್ತದಿಂದ ಟಿ.ಎನ್. ನರಸಿಂಹಮೂರ್ತಿ ವೃತ್ತದವರೆಗೆ, ವಸ್ತು ಪ್ರರ್ದಶನದ ಮುಂಭಾಗದ ಟ್ಯಾಂಕ್ ಬಂಡ್ ರಸ್ತೆಯಲ್ಲಿ  ಬಿ.ಎನ್.ರಸ್ತೆ ಜಂಕ್ಷನ್‍ನಿಂದ ಶಾಲಿವಾಹನ (ಮೃಗಾಲಯದ ರಸ್ತೆ) ರಸ್ತೆ ಜಂಕ್ಷನ್‍ವರೆಗೆ, ಇಟ್ಟಿಗೆಗೂಡಿನ ಹೊಸ ಬೀದಿ 5ನೇ ತಿರುವು ರಸ್ತೆಯಲ್ಲಿ ಶಾಲಿವಾಹನ (ಮೃಗಾಲಯದ ರಸ್ತೆ) ರಸ್ತೆ ಜಂಕ್ಷನ್‍ನಿಂದ ವಸ್ತು ಪ್ರರ್ದಶನದ ಪೂರ್ವ ದ್ವಾರದವರೆಗೆ, ಮಾನಸರ ರಸ್ತೆಯಲ್ಲಿ ವಾಣಿವಿಲಾಸ ರಸ್ತೆ ಜಂಕ್ಷನ್‍ನಿಂದ ಲೋಕರಂಜನ್‍ರಸ್ತೆ ಜಂಕ್ಷನ್ ವರೆಗೆ, ಮಲೈಮಹದೇಶ್ವರ ರಸ್ತೆಯಲ್ಲಿ ಬಿ.ಎನ್.ರಸ್ತೆ ಜಂಕ್ಷನ್‍ನಿಂದ (ಛತ್ರಿ ಮರ) ಪೂರ್ವಕ್ಕೆ ಚನ್ನಯ್ಯ ವೃತ್ತದವರೆಗೆ, ಸರ್ಕಾರಿ ಭವನದ ರಸ್ತೆಯಲ್ಲಿ ಸರ್ಕಾರಿ ಭವನದ ದಕ್ಷಿಣ ದ್ವಾರದ ಜಂಕ್ಷನ್‍ನಿಂದ ದಕ್ಷಿಣಕ್ಕೆ ಜಯಚಾಮರಾಜೇಂದ್ರ ಒಡೆಯರ್ ವೃತ್ತದವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.