ಮಂಡ್ಯ ಲೋಕಸಭಾ ಜೆಡಿಎಸ್ ಅಭ್ಯಥಿಯಾಗಿ ನಿಖಿಲ್ ಕುಮಾರಸ್ವಾಮಿ

ಮಂಡ್ಯ ಲೋಕಸಭಾ ಜೆಡಿಎಸ್ ಅಭ್ಯಥಿಯಾಗಿ ನಿಖಿಲ್ ಕುಮಾರಸ್ವಾಮಿ

LK   ¦    Mar 14, 2019 07:28:25 PM (IST)
ಮಂಡ್ಯ ಲೋಕಸಭಾ ಜೆಡಿಎಸ್ ಅಭ್ಯಥಿಯಾಗಿ ನಿಖಿಲ್ ಕುಮಾರಸ್ವಾಮಿ

ಮಂಡ್ಯ: ಮಂಡ್ಯದ ಸಿಲ್ವರ್‍ ಜೂಬ್ಲಿ ಪಾರ್ಕ್‍ನಲ್ಲಿ ಆಯೋಜಿಸಿದ್ದ ಬೃಹತ್ ಜೆಡಿಎಸ್ ಸಮಾವೇಶದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಘೋಷಣೆ ಮಾಡಲಾಗಿದೆ.

ಜೆಡಿಎಸ್‍ನ ವರಿಷ್ಠ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಅವರು ನಿಖಿಲ್ ಕುಮಾರಸ್ವಾಮಿ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಘೋಷಣೆ ಮಾಡಿದರು.

ಈ ವೇಳೆ ಮಾತನಾಡಿದ ಮಾಜಿ ಶಾಸಕ ಮಧುಬಂಗಾರಪ್ಪ, ಜಿಲ್ಲೆಯ ಜೀವನಾಡಿ ಕಾವೇರಿ ನದಿ ನೀರು ಜೋಪಾನ ಮಾಡುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಅವರನ್ನು ಕಾಪಾಡುವಂತೆ ಜನರಲ್ಲಿ ಮನವಿ ಮಾಡಿದರು.

ಕಾರ್ಯಕ್ರಮಕ್ಕೂ ಮುನ್ನ ಮದ್ದೂರಿನಿಂದ ಮಂಡ್ಯದವರೆಗೆ ಬೈಕ್ ರ್ಯಾಲಿಯನ್ನು ಕೂಡ ಆಯೋಜಿಸಲಾಗಿತ್ತು.

More Images