ಮೈಸೂರು ದಸರಾ ಜಂಬೂ ಸವಾರಿಗೆ ಎಲ್ಲೆಡೆ ಕಾತರ..

ಮೈಸೂರು ದಸರಾ ಜಂಬೂ ಸವಾರಿಗೆ ಎಲ್ಲೆಡೆ ಕಾತರ..

LK   ¦    Oct 08, 2019 12:30:12 PM (IST)
ಮೈಸೂರು ದಸರಾ ಜಂಬೂ ಸವಾರಿಗೆ ಎಲ್ಲೆಡೆ ಕಾತರ..

ಮೈಸೂರು: ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಎಲ್ಲರ ಚಿತ್ತ ದಸರಾದತ್ತ ಹರಿದಿದೆ.

ಮಧ್ಯಾಹ್ನ 2-15 ರಿಂದ 2-58 ರವರೆಗೆ ಅರಮನೆ ಬಲರಾಮ ದ್ವಾರದಲ್ಲಿ ಸಲ್ಲುವ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜ ಪೂಜೆಯನ್ನು ನೆರವೇರಿಸಲಾಗುತ್ತದೆ. ಬಳಿಕ ಕಲಾತಂಡಗಳು, ಸ್ತಬ್ದ ಚಿತ್ರಗಳ ಮೆರವಣಿಗೆ ಹೊರಡಲಿದೆ.

ಸಂಜೆ 4.31 ರಿಂದ 4.57 ರವರೆಗೆ ಸಲ್ಲುವ ಶುಭ ಕುಂಭ ಮಕರ ಲಗ್ನದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅರಮನೆಯ ಒಳಾವರಣದಲ್ಲಿ ಶುಭ ಕುಂಭ ಲಗ್ನದಲ್ಲಿ ಅರ್ಜುನನ ಮೇಲೆ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ಅಧಿದೇವತೆ ತಾಯಿ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿಜೃಂಭಣೆಯ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

 

ಜಂಬೂಸವಾರಿ ಅರಮನೆ ಆವರಣದಿಂದ ಆಂಜನೇಯ ದೇಗುಲದ ಮೂಲಕ ಜಯಚಾಮರಾಜೇಂದ್ರ ವೃತ್ತ, ಕೆ.ಆರ್.ವೃತ್ತ, ಸರ್ಕಾರಿ ಆಯುರ್ವೇದ ಆಸ್ಪತ್ರೆ ವೃತ್ತ, ಹೈವೇ ವೃತ್ತದ ಮೂಲಕ ಬನ್ನಿಮಂಟಪದವರೆಗೆ ಸುಮಾರು 5 ಕಿ.ಮೀ. ದೂರದ ಮಾರ್ಗಗಳ ಎರಡು ಬದಿಯಲ್ಲಿ ಜನ ಕಿಕ್ಕಿರಿದು ಸೇರುತ್ತಿದ್ದು, ಮೊದಲೇ ಬಂದು ತಮಗೆ ಸೂಕ್ತವಾದ ಸ್ಥಳಗಳನ್ನು ಹಿಡಿದುಕೊಂಡು ಆಸೀನರಾಗಲು ಹೆಜ್ಜೆ ಹಾಕುತ್ತಿದ್ದಾರೆ. ಅಲ್ಲದೆ ಮರ ಮತ್ತು ಕಟ್ಟಡ ಏರಿ ಜಂಬೂಸವಾರಿ ನೋಡಲು ಜನ ಮುಂದಾಗುತ್ತಿದ್ದಾರೆ.

 

ಇನ್ನು ಜಂಬೂಸವಾರಿ ಸಾಗುವ ಹಾದಿಯುದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಭದ್ರತೆಯಲ್ಲಿ 14 ಮಂದಿ ಎಸ್ಪಿಗಳು, 54 ಡಿವೈಎಸ್ಪಿ, 153 ಇನ್ಸ್‍ಪೆಕ್ಟರ್, 336 ಸಬ್‍ಇನ್ಸ್‍ಪೆಕ್ಟರ್ ಇವರ ಜತೆಗೆ ಒಂದು ಇಮಿಡಿ ಯೇಟ್ ಬ್ಯಾಕ್ ಆಫ್ ಸಪೆÇೀರ್ಟ್ ಕಮಾಂಡೋ ಪಡೆ, 2 ತುಕಡಿ ಸಿಟಿ ಕಮಾಂಡೋ, 3 ರಾಜ್ಯ ವಿಪತ್ತು ನಿವಾರಣಾ ಪಡೆ, 30 ಮೌಂಟೆಡ್ ತುಕಡಿ, 30 ಆಂಟಿ ಸಬೊಟೇಜ್ ಚೆಕ್ ಟೀಂ, 30 ಶ್ವಾನ ದಳ, 3 ಬಾಂಬ್ ಪತ್ತೆ ಮತ್ತು ನಿಗ್ರಹ ತಂಡ, 34 ಕೆಎಸ್ ಆರ್ಪಿ ತುಕಡಿ, 20 ಸಿಎಆರ್ ಮತ್ತು ಡಿಎಆರ್ ತುಕಡಿ ಪೆÇಲೀಸರನ್ನು ನಿಯೋಜಿಸಲಾಗಿದೆ.

 

ಸಂಜೆ 7 ಗಂಟೆಗೆ ಬನ್ನಿಮಂಟಪ ಮೈದಾನದಲ್ಲಿ ಪಂಜಿನ ಕವಾಯತು (ಟಾರ್ಚ್ ಲೈಟ್ ಪೆರೇಡ್) ನಡೆಯಲಿದ್ದು, ರಾಜ್ಯಪಾಲರಾದ ವಜುಭಾಯಿ ವಾಲಾ ಅವರು ಕವಾಯತು ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಲಿದ್ದು, ಶಾಸಕರಾದ ತನ್ವೀರ್ ಸೇಠ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು

 

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡ, ಕೇಂದ್ರ ಸಂಸದೀಯ ವ್ಯವಹಾರಗಳು ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ, ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ, ಉಪ ಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಸಚಿವರಾದ ಗೋವಿಂದ ಎಂ. ಕಾರಜೋಳ, ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ. ಸಿ.ಎನ್. ಅಶ್ವಥ್ ನಾರಾಯಣ್, ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ್ ಸಂಗಪ್ಪ ಸವದಿ, ವಸತಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ, ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಚಿವರಾದ ಸಿ.ಟಿ. ರವಿ, ಮೈಸೂರು ಮಹಾನಗರ ಪಾಲಿಕೆಯ ಮಹಾಪೌರರಾದ ಪುಷ್ಟಲತಾ ಜಗನ್ನಾಥ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬಿ.ಸಿ. ಪರಿಮಳ ಶ್ಯಾಂ, ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಹಾಗೂ ನಗರ ಪೆÇಲೀಸ್ ಕಮೀಷ್ನರ್ ಕೆ.ಟಿ.ಬಾಲಕೃಷ್ಣ ಪಾಲ್ಗೊಳ್ಳಲಿದ್ದಾರೆ.