ಉದ್ಯೋಗ ಖಾತರಿ ಯೋಜನೆ: ಅರ್ಹರಿಗೆ ಉದ್ಯೋಗ ಕಲ್ಪಿಸಲು ಜಿ.ಪಂ ಸಿಇಒ ಸೂಚನೆ

ಉದ್ಯೋಗ ಖಾತರಿ ಯೋಜನೆ: ಅರ್ಹರಿಗೆ ಉದ್ಯೋಗ ಕಲ್ಪಿಸಲು ಜಿ.ಪಂ ಸಿಇಒ ಸೂಚನೆ

CI   ¦    May 15, 2019 10:37:19 AM (IST)
ಉದ್ಯೋಗ ಖಾತರಿ ಯೋಜನೆ: ಅರ್ಹರಿಗೆ ಉದ್ಯೋಗ ಕಲ್ಪಿಸಲು ಜಿ.ಪಂ ಸಿಇಒ ಸೂಚನೆ

ಮಡಿಕೇರಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು ವಿವಿಧ ಇಲಾಖೆಗಳ ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸುವಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಪಾತ್ರ ಪ್ರಮುಖವಾಗಿದ್ದು, ಆ ನಿಟ್ಟಿನಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕಿದೆ. ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಮೂಲಕ ಅರ್ಹರಿಗೆ ಉದ್ಯೋಗವನ್ನು ಕಲ್ಪಿಸಿ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚನೆ ನೀಡಿದ್ದಾರೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ವಿವಿಧ ಇಲಾಖೆಗಳ ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಾಗಾರ ನಗರದ ಕೋಟೆ ಹಳೇ ವಿಧಾನಸಭಾಂಗಣದಲ್ಲಿ ನಡೆಯಿತು.

ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಸಿಇಒ ಕೆ.ಲಕ್ಷ್ಮಿಪ್ರಿಯಾ ಅವರು, ಗ್ರಾಮೀಣ ಪ್ರದೇಶದ ಬಡವರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಪ್ರಮುಖವಾಗಿದ್ದು, ವೈಯಕ್ತಿಕ ಹಾಗೂ ಸಮುದಾಯ ಕೆಲಸಗಳನ್ನು ನೀಡಿ ಉದ್ಯೋಗ ಕಲ್ಪಿಸುವಂತಾಗಬೇಕು ಎಂದರು.

ಸರ್ಕಾರದ ಹೆಚ್ಚಿನ ಮೊತ್ತದ ಅನುದಾನದಿಂದ ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಈ ಯೋಜನೆಯು ಸಹಕಾರಿಯಾಗುತ್ತದೆ. ವಿವಿಧ ಇಲಾಖೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪಾಲ್ಗೊಳ್ಳುವ ಮೂಲಕ ಕಾರ್ಯಾಗಾರದ ಸದ್ಬಳಕೆ ಪಡೆದುಕೊಳ್ಳವ ಮೂಲ ಉದ್ದೇಶವನ್ನು ಸಾಧಿಸಲು ಪ್ರಯತ್ನ ಪಡಬೇಕಾಗಿದೆ ಎಂದು ಅವರು ಕರೆ ನೀಡಿದರು.

More Images