ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 7 ಮಂದಿಗೆ ಕೋವಿಡ್ ಪಾಸಿಟಿವ್

ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 7 ಮಂದಿಗೆ ಕೋವಿಡ್ ಪಾಸಿಟಿವ್

SK   ¦    May 22, 2020 06:38:56 PM (IST)
ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 7 ಮಂದಿಗೆ ಕೋವಿಡ್ ಪಾಸಿಟಿವ್

ಕಾಸರಗೋಡು: ಜಿಲ್ಲೆಯಲ್ಲಿ ಶುಕ್ರವಾರ 7 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದೆ.

ಪುತ್ತಿಗೆ ನಿವಾಸಿಯಾಗಿರುವ 57 ವರ್ಷ ಪ್ರಾಯದ ವ್ಯಕ್ತಿ, ಮುಳಿಯಾರು ನಿವಾಸಿ 42 ವರ್ಷದ ವ್ಯಕ್ತಿ, ಕುಂಬಳೆ ನಿವಾಸಿಗಳಾದ 36, 38, 42, 56 ವರ್ಷದ ಪ್ರಾಯದ ವ್ಯಕ್ತಿಗಳಿಗೆ ಸೋಂಕು ಖಚಿತಗೊಂಡಿದೆ.

ಇವರಲ್ಲಿ 6 ಮಂದಿ ಪುರುಷರಾಗಿದ್ದಾರೆ. ಪುತ್ತಿಗೆ ನಿವಾಸಿ ಮಹಾರಾಷ್ಟ್ರದಿಂದ ಆಗಮಿಸಿದ್ದಾರೆ. ಕುಂಬಳೆ ನಿವಾಸಿಗಳು ಒಂದೇ ವಾಹನದಲ್ಲಿ ಸಂಚರಿಸಿದ್ದು, ಆ ಮೂಲಕ ಸೋಂಕು ತಗುಲಿಸಿಕೊಂಡವರು. ಇವರಲ್ಲಿ ಇಬ್ಬರು ಸಹೋದರರಾಗಿದ್ದಾರೆ. ಇವರೆಲ್ಲರೂ ಉಕ್ಕಿನಡ್ಕದ ಕಾಸರಗೋಡು ಮೆಡಿಕಲ್ ಕಾಲೇಜಿನಲ್ಲಿ ದಾಖಲಾಗಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 2648 ಮಂದಿ ನಿಗಾದಲ್ಲಿದ್ದಾರೆ. ಮನೆಗಳಲ್ಲಿ 2161 ಮಂದಿ, ಆಸ್ಪತ್ರೆಗಳಲ್ಲಿ 487 ಮಂದಿ ನಿಗಾದಲ್ಲಿದ್ದಾರೆ. ಶುಕ್ರವಾರ 60 ಮಂದಿ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ.

 ಜಿಲ್ಲೆಯಲ್ಲಿ 6021 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 5434 ಮಂದಿಯ ಫಲಿತಾಂಶ ನೆಗೆಟಿವ್ ಆಗಿದೆ. 196 ಮಂದಿಯ ಫಲಿತಾಂಶ ಲಭಿಸಿಲ್ಲ.