ಬೆಂಗಳೂರು: ಕೆಲವು ಹಾಲಿ ಶಾಸಕರಿಗೆ ಈ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಇಲ್ಲ ಎಂದು ಮಾಜಿ ಸಿಎಂ, ಬಿ.ಎಸ್. ಯಡಿಯೂರಪ್ಪ ನೀಡಿರುವ ಹೇಳಿಕೆ ಪಕ್ಷದಲ್ಲಿ ಸಂಚಲನ ಸೃಷ್ಟಿಸಿದೆ.
ಸುದ್ದಿಗಾರರ ಜತೆಗೆ ಮಾತನಾಡಿದ ಯಡಿಯೂರಪ್ಪ ನಿಷ್ಕ್ರಿಯ ಶಾಸಕರಿಗೆ ಚುನಾವಣೆಯಲ್ಲಿ ಟಿಕೆಟ್ ನೀಡುವುದಿಲ್ಲ. ನಾಲ್ಕರಿಂದ ಆರು ಶಾಸಕರು ಟಿಕೆಟ್ ಕಳೆದುಕೊಳ್ಳಬಹುದು. ಉಳಿದಂತೆ ಹಾಲಿ ಶಾಸಕ ರಿಗೆ ಟಿಕೆಟ್ ನೀಡಲಾಗುತ್ತದೆ’ ಎಂದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕೂಡ ಈ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
‘ಬಿಎಸ್‌ವೈ ಹೇಳಿಕೆಯನ್ನು ಅಲ್ಲಗಳೆಯುವುದಿಲ್ಲ. ಈ ಬಗ್ಗೆ ಈಗ ಚರ್ಚೆ ಬೇಡ, ಟಿಕೆಟ್ ವಿಚಾರ ಅಂತಿಮಗೊಳ್ಳುವುದು ಸಂಸದೀಯ ಮಂಡಳಿ ಸಭೆಯಲ್ಲಿ ಎಂದು ತಿಳಿಸಿದ್ದಾರೆ. ಇನ್ನೊಂದೆಡೆ ಐವರು ಸಚಿವರು ಪಕ್ಷ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂಬ ವದಂತಿ ಎರಡೂ ಪಕ್ಷಗಳ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಮು೦ದಿನ ಮುಖ್ಯಮಂತ್ರಿ ಯಾರು ಎಂಬುದನ್ನು ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದು ಯಡಿಯೂರಪ್ಪ ಒಗಟಿನ ಹೇಳಿಕೆ ನೀಡಿದ್ದಾರೆ.
ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ. ಆದರೆ ಶಾಸಕಾಂಗ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಯಾರೆಂಬುದು ನಿರ್ಧಾರವಾಗುತ್ತದೆ ಎಂದು ಸುದ್ದಿಗಾರರಿಗೆ ತಿಳಿಸಿರುವುದು ಚರ್ಚೆಗೆ ಕಾರಣವಾಗಿದೆ. ಮುಂದಿನ ಹದಿನೈದು ದಿನಗಳ ಅವಧಿಯಲ್ಲಿ ಬಿಜೆಪಿಯ ಐವರು ಸಚಿವರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಚರ್ಚೆ ಕಾಂಗ್ರೆಸ್ ಪಡಸಾಲೆಯ ಬಲವಾಗಿದೆ, ಆದರೆ ಆ ಸಚಿವರು ಯಾರು ಎಂಬ ಗುಟ್ಟು ಬಿಟ್ಟುಕೊಡಲು ಯಾರೂ ಸಿದ್ಧರಿಲ್ಲ. ಸಚಿವ ನಾರಾಯಣ ಗೌಡ ಹಾಗೂ ವಿ. ಸೋಮಣ್ಣ ಆ ಪೈಕಿ ಇಬ್ಬರು ಆಗಿರಬಹುದೆಂಬುದು ಸಾರ್ವಜನಿಕರ ಗುಮಾನಿ, ಇವ ರಿಬ್ಬರೂ ಇತ್ತೀಚೆಗೆ ಇದಕ್ಕೆ ತಕ್ಕಂತೆಯೇ ವರ್ತಿಸುತ್ತಿದ್ದಾರೆ. ಯಾವುದೇ ಸಚಿವರು ಈ ಹಂತದಲ್ಲಿ ಪಕ್ಷಬಿಡುವುದಿಲ್ಲಎಂದು ವಿಶ್ವಾಸ ವ್ಯಕ್ತಪಡಿಸಿವೆ. ಇನ್ನೊಂದೆಡೆ, ‘ನಮಗೆ ಟೋಪಿ ಹಾಕಿ ಹೋದವರು ಇನ್ನು 15 ದಿನಗಳಲ್ಲಿಎಲ್ಲೆಲ್ಲಿ ಇರುತ್ತಾರೆ ಕಾದು ನೋಡಿ’ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಎಂಬುದನ್ನು ನೀಡಿರುವ ಹೇಳಿಕೆಯಿಂದ ಹೆದರಿದವರ ಮೇಲೆ ಹಾವು ಎಸೆದಂತಾಗಿದೆ.