ಟೀಮ್ ಇಂಡಿಯಾದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಪಿಲ್ ದೇವ್ ದಾಖಲೆಯನ್ನು ಬ್ರೇಕ್ ಮಾಡಿದ್ದಾರೆ. 2ನೇ ಇನ್ನಿಂಗ್ಸ್ನಲ್ಲಿ ಚರಿತ್ ಅಸಲಂಕಾ ವಿಕೆಟ್ ಪಡೆಯುವ ಮೂಲಕ ಅಶ್ವಿನ್ 435ನೇ ಟೆಸ್ಟ್ ವಿಕೆಟ್ ಪಡೆದರು.
ಅಶ್ವಿನ್ 85 ಟೆಸ್ಟ್ ಪಂದ್ಯಗಳಿಂದ 435 ವಿಕೆಟ್ ಪಡೆಯೋ ಮೂಲಕ ಈ ಮಾದರಿಯಲ್ಲಿ ಹೆಚ್ಚು ವಿಕೆಟ್ ಪಡೆದಿರುವ ವಿಶ್ವದ 9ನೇ ಬೌಲರ್ ಎನಿಸಿಕೊಂಡಿದ್ದಾರೆ. ಟೆಸ್ಟ್ ಮಾದರಿಯ ಕ್ರಿಕೆಟ್ನಲ್ಲಿ ಕಪಿಲ್ ದೇವ್ ಹಿಂದಿಕ್ಕಿ ಗರಿಷ್ಠ ವಿಕೆಟ್ ಪಡೆದ ಭಾರತದ 2ನೇ ಬೌಲರ್ ಎನಿಸಿಕೊಂಡಿದ್ದಾರೆ.
ಭಾರತ ತಂಡದ ಮಾಜಿ ನಾಯಕ ಕಪಿಲ್ ದೇವ್ 131 ಟೆಸ್ಟ್ ಪಂದ್ಯಗಳಿಂದ 434 ವಿಕೆಟ್ ಪಡೆದಿದ್ದರು. ಅನಿಲ್ ಕುಂಬ್ಳೆ 619 ವಿಕೆಟ್ಗಳೊಂದಿಗೆ ಅಗ್ರ ಸ್ಥಾನದಲ್ಲಿದ್ದಾರೆ.