ವಿಶ್ವಕಪ್ ಸೆಮಿಫೈನಲ್: ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ

ವಿಶ್ವಕಪ್ ಸೆಮಿಫೈನಲ್: ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ

HSA   ¦    Jul 09, 2019 02:49:40 PM (IST)
ವಿಶ್ವಕಪ್ ಸೆಮಿಫೈನಲ್: ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ

ಮ್ಯಾಂಚೆಸ್ಟರ್: ವಿಶ್ವಕಪ್ ನ ಸೆಮಿಫೈನಲಿನಲ್ಲಿ ಟೀಂ ಇಂಡಿಯಾ ವಿರುದ್ಧ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಕಿವೀಸ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅವರು ಟಾಸ್ ಗೆದ್ದ ಬಳಿಕ ಮೊದಲು ಬ್ಯಾಟಿಂಗ್ ಮಾಡುವುದಾಗಿ ಹೇಳಿದರು.

ಪಂದ್ಯಕ್ಕೆ ಮಳೆ ಅಡ್ಡಿ ಉಂಟು ಮಾಡುವ ಸಾಧ್ಯತೆ ಇರುವ ಕಾರಣದಿಂದಾಗಿ ಮೊದಲು ಬ್ಯಾಟಿಂಗ್ ಮಾಡುವುದು ಸುರಕ್ಷಿತ ಎಂದು ನಂಬಲಾಗಿದೆ.

ಲೀಗ್ ಹಂತದಲ್ಲಿ ನ್ಯೂಜಿಲೆಂಡ್ ಮತ್ತು ಟೀಂ ಇಂಡಿಯಾದ ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು.