ಮಾಜಿ ಆಲ್ ರೌಂಡರ್ ಯೂಸುಫ್ ಪಠಾಣ್ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ

ಮಾಜಿ ಆಲ್ ರೌಂಡರ್ ಯೂಸುಫ್ ಪಠಾಣ್ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ

MS   ¦    Feb 26, 2021 08:02:29 PM (IST)
ಮಾಜಿ ಆಲ್ ರೌಂಡರ್ ಯೂಸುಫ್ ಪಠಾಣ್ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ

ನವದೆಹಲಿ : ಭಾರತದ ಮಾಜಿ ಆಲ್ ರೌಂಡರ್ ಯೂಸುಫ್ ಪಠಾಣ್ ಶುಕ್ರವಾರ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದು, ಕುರಿತಾಗಿ ತಮ್ಮ ಟ್ವಿಟರ್ ಅಕೌಂಟ್ ನಲ್ಲಿ ಹಂಚಿಕೊಂಡಿದ್ದಾರೆ.

'ನನ್ನ ಕುಟುಂಬ, ಸ್ನೇಹಿತರು, ಅಭಿಮಾನಿಗಳು, ತಂಡಗಳು, ತರಬೇತುದಾರರು ಮತ್ತು ಇಡೀ ದೇಶಕ್ಕೆ ಸಂಪೂರ್ಣ ವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ' ಎಂದು ಹೇಳುವ ಮೂಲಕ ಎಲ್ಲಾ ರೀತಿಯ ಕ್ರಿಕೆಟ್ ವೃತ್ತಿಗೆ ವಿದಾಯ ಹೇಳುವುದರ ಬಗ್ಗೆ ಘೋಷಿಸಿಕೊಂಡಿದ್ದಾರೆ.

ಈವರೆಗೂ ಯೂಸುಫ್, 57 ಏಕದಿನ ಹಾಗೂ 22 ಟಿ 20 ಪಂದ್ಯಗಳನ್ನು ಭಾರತದ ಪರ ಆಡಿದ್ದರು . 2007 ರ ಐಸಿಸಿ ಟಿ 20 ವಿಶ್ವಕಪ್ ಮತ್ತು 2011 ರ ಐಸಿಸಿ ವಿಶ್ವಕಪ್ ಗೆದ್ದ ಭಾರತ ತಂಡದ ಭಾಗವಾಗಿದ್ದರು . ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಹಾಗೂ ಉತ್ತಮ ಆಫ್ ಸ್ಪಿನ್ನರ್ ಆಗಿರುವ ಯೂಸುಫ್ ಭಾರತದ ಪರ 810 ಏಕದಿನ ರನ್ ಹಾಗೂ 236 ಟಿ 20 ಐ ರನ್ ಗಳಿಸಿದ್ದರು . ಸೀಮಿತ ಓವರ್ ಗಳ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 46 ವಿಕೆಟ್ ಗಳನ್ನು ಕಬಳಿಸಿದ್ದರು .