ಮತ್ತೊಂದು ದಾಖಲೆ ಮಾಡಿದ ರೋಹಿತ್ ಶರ್ಮಾ

ಮತ್ತೊಂದು ದಾಖಲೆ ಮಾಡಿದ ರೋಹಿತ್ ಶರ್ಮಾ

HSA   ¦    Oct 23, 2019 04:42:55 PM (IST)
ಮತ್ತೊಂದು ದಾಖಲೆ ಮಾಡಿದ ರೋಹಿತ್ ಶರ್ಮಾ

ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಮಾಜಿ ಆಟಗಾರ ಗೌತಮ್ ಗಂಭೀರ್ ಬಳಿಕ ಎಲ್ಲಾ ಮೂರು ವಿಧದ ಕ್ರಿಕೆಟ್ ನ ಅಗ್ರ ಹತ್ತರ ರ್ಯಾಕಿಂಗ್ನಲ್ಲಿ ರೋಹಿತ್ ಶರ್ಮಾ ಸ್ಥಾನ ಪಡೆದಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧ ಕೊನೆಗೊಂಡ ಮೂರು ಟೆಸ್ಟ್ ಗಳ ಸರಣಿಯಲ್ಲಿ ಮೂರು ಶತಕ ಬಾರಿಸಿದ ರೋಹಿತ್ ಶರ್ಮಾ ಟೆಸ್ಟ್ ರ್ಯಾಂಕಿಂಗ್

 ನಲ್ಲಿ ಕೂಡ ಅಗ್ರ ಹತ್ತರಲ್ಲಿ ಸ್ಥಾನ ಪಡೆದಿದ್ದಾರೆ. ರೋಹಿತ್ ಸರಣಿಯಲ್ಲಿ ಮೂರು ಶತಕದ ಜತೆಗೆ ಒಟ್ಟು 529 ರನ್ ಬಾರಿಸಿದ್ದರು.

ಈಗಾಗಲೇ ರೋಹಿತ್ ಶರ್ಮಾ ಏಕದಿನ ಹಾಗೂ ಟಿ-20ಯಲ್ಲೂ ಅಗ್ರ ಹತ್ತರಲ್ಲಿ ಸ್ಥಾನ ಪಡೆದಿದ್ದಾರೆ.

ಇದಕ್ಕೆ ಮೊದಲು ಗೌತಮ್ ಗಂಭೀರ್ ಮತ್ತು ವಿರಾಟ್ ಕೊಹ್ಲಿ ಈ ಸಾಧನೆ ಮಾಡಿರುವರು.