ಬ್ರಿಸ್ಬೇನ್: ಆಸ್ಟ್ರೇಲಿಯಾ ವಿರುದ್ಧ ಬ್ರಿಸ್ಬೇನ್ನಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಸರಣಿಯ ಎರಡನೇ ಶತಕ ದಾಖಲಿಸಿದ್ದಾರೆ.
ಪರ್ತ್ ನಲ್ಲಿ ಮೊನ್ನೆ ನಡೆದಿದ್ದ ಭಾರತದ ಆರಂಭಿಕ ಬ್ಯಾಟ್ಸಮನ್ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲೂ ಭರ್ಜರಿ ಶತಕ ಬಾರಿಸಿದ್ದರು. ಇದೀಗ ಬ್ರಿಸ್ಬೇನ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ 111 ಎಸೆತಗಳಲ್ಲಿ ಶತಕ ಪೂರೈಸಿದ ರೋಹಿತ್, ಇದರಲ್ಲಿ ಆಕರ್ಷಕ 8 ಬೌಂಡರಿ ಮತ್ತು ಮೂರು ಸಿಕ್ಸರ್ ಸಿಡಿಸಿದ್ದಾರೆ.